ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಿಗೆ ಚಾಕು ಇರಿತ
ಬೆಂಗಳೂರು: ಟೌನ್ಹಾಲ್ ಬಳಿ ಜನಜಾಗೃತಿ ಕಾರ್ಯಕ್ರಮ ಮುಗಿಸಿ ಹೊರಟವನಿಗೆ ಚಾಕು ಇರಿಯಲಾಗಿದೆ. ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಾಗಿದ್ದ ವರುಣ್ ಎಂಬಾತ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಕಾರ್ಯಕ್ರದಲ್ಲಿ ಭಾಗಿಯಾಗಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಬೌನ್ಸ್ ಬೈಕ್ನಲ್ಲಿ ತೆರಳುತ್ತಿದ್ದಾಗ 2 ಬೈಕ್‌ಗಳಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ತಲೆಗೆ, ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ವರುಣ್ನನ್ನು ದಾಖಲಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಮತ್ತು ಪಶ್ಚಿಮ […]
ಬೆಂಗಳೂರು: ಟೌನ್ಹಾಲ್ ಬಳಿ ಜನಜಾಗೃತಿ ಕಾರ್ಯಕ್ರಮ ಮುಗಿಸಿ ಹೊರಟವನಿಗೆ ಚಾಕು ಇರಿಯಲಾಗಿದೆ. ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಾಗಿದ್ದ ವರುಣ್ ಎಂಬಾತ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಕಾರ್ಯಕ್ರದಲ್ಲಿ ಭಾಗಿಯಾಗಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಬೌನ್ಸ್ ಬೈಕ್ನಲ್ಲಿ ತೆರಳುತ್ತಿದ್ದಾಗ 2 ಬೈಕ್‌ಗಳಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ತಲೆಗೆ, ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ.
ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ವರುಣ್ನನ್ನು ದಾಖಲಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಮತ್ತು ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವರುಣ್ ಮೇಲಿನ ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಲಾಸಿಪಾಳ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಡಿಸಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.
Published On - 5:23 pm, Sun, 22 December 19