ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಿಗೆ ಚಾಕು ಇರಿತ

ಬೆಂಗಳೂರು: ಟೌನ್​ಹಾಲ್ ಬಳಿ ಜನಜಾಗೃತಿ ಕಾರ್ಯಕ್ರಮ ಮುಗಿಸಿ ಹೊರಟವನಿಗೆ ಚಾಕು ಇರಿಯಲಾಗಿದೆ. ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಾಗಿದ್ದ ವರುಣ್ ಎಂಬಾತ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಕಾರ್ಯಕ್ರದಲ್ಲಿ ಭಾಗಿಯಾಗಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಬೌನ್ಸ್ ಬೈಕ್​ನಲ್ಲಿ ತೆರಳುತ್ತಿದ್ದಾಗ 2 ಬೈಕ್‌ಗಳಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ತಲೆಗೆ, ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ವರುಣ್​ನನ್ನು ದಾಖಲಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಮತ್ತು ಪಶ್ಚಿಮ […]

ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಿಗೆ ಚಾಕು ಇರಿತ
ಸಾಧು ಶ್ರೀನಾಥ್​

Updated on: Dec 22, 2019 | 5:25 PM

ಬೆಂಗಳೂರು: ಟೌನ್​ಹಾಲ್ ಬಳಿ ಜನಜಾಗೃತಿ ಕಾರ್ಯಕ್ರಮ ಮುಗಿಸಿ ಹೊರಟವನಿಗೆ ಚಾಕು ಇರಿಯಲಾಗಿದೆ. ಇಂಡಿಯಾ ಫಾರ್ ಸಿಎಎ ಕಾರ್ಯಕರ್ತನಾಗಿದ್ದ ವರುಣ್ ಎಂಬಾತ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಕಾರ್ಯಕ್ರದಲ್ಲಿ ಭಾಗಿಯಾಗಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಬೌನ್ಸ್ ಬೈಕ್​ನಲ್ಲಿ ತೆರಳುತ್ತಿದ್ದಾಗ 2 ಬೈಕ್‌ಗಳಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ತಲೆಗೆ, ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ.

ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ವರುಣ್​ನನ್ನು ದಾಖಲಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಮತ್ತು ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವರುಣ್ ಮೇಲಿನ ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಲಾಸಿಪಾಳ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಡಿಸಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.

Published On - 5:23 pm, Sun, 22 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us