ಶಿಗ್ಗಾಂವಿ: ಎರಡು ಗುಂಪುಗಳ ನಡುವೆ ಗಲಾಟೆ, 8 ಜನ ಯುವಕರಿಗೆ ಚಾಕು ಇರಿತ

ಎರಡು ಗುಂಪುಗಳ ನಡುವೆ ಗಲಾಟೆ ನಡೆದು 8 ಜನ ಯುವಕರಿಗೆ ಚಾಕು ಇರಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಮಲಾ ನಗರ (ತಡಸ ತಾಂಡಾ)ದಲ್ಲಿ ನಡೆದಿದೆ.

ಶಿಗ್ಗಾಂವಿ: ಎರಡು ಗುಂಪುಗಳ ನಡುವೆ ಗಲಾಟೆ, 8 ಜನ ಯುವಕರಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 19, 2023 | 8:13 AM

ಹಾವೇರಿ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು 8 ಜನ ಯುವಕರಿಗೆ ಚಾಕು ಇರಿದ ಘಟನೆ ಜಿಲ್ಲೆಯ ಶಿಗ್ಗಾಂವಿ (Shiggaon) ತಾಲೂಕಿನ ಕಮಲಾ ನಗರ (ತಡಸ ತಾಂಡಾ)ದಲ್ಲಿ ನಡೆದಿದೆ. ಗಲಾಟೆಯಲ್ಲಿ ರವಿ ಲಮಾಣಿ, ಶಂಕರ್ ಲಮಾಣಿ, ರಾಜು ಲಮಾಣಿ, ಮಹೇಶ್‌ ಲಮಾಣಿ, ಲಾಲಪ್ಪ ಲಮಾಣಿ, ಹನುಮಂತ ಪೂಜಾರಿ, ಅಕ್ಷಯ್‌ ಲಮಾಣಿ ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಹನುಮಂತ ಸೇರಿ 8 ಜನರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಇನ್ನು ಘರ್ಷಣೆ ಗ್ರಾಮದ ಬಸ್ ನಿಲ್ದಾಣದ ಜಾಗ ವಿಚಾರವಾಗಿ ನಡೆದ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳು ಖಾರದಪುಡಿ ಎರಚಿ ಚಾಕು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ 8 ಜನರಿಗೆ ತಲೆ, ಕೈ, ಬೆನ್ನು ಸೇರಿ ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿದ್ದು, ಓರ್ವನ ಕೈ ಬೆರಳು ಕತ್ತರಿಸಿದ್ದು, ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆನ್ಲೈನ್ ಜೂಜಿಗೆ ವ್ಯಕ್ತಿ ಬಲಿ ಬಿದ್ದು ಆತ್ಮಹತ್ಯೆ

ತುಮಕೂರು: ಆನ್ಲೈನ್ ಜೂಜಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ,‌ ತುರುವೇಕೆರೆ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಮಂಜುನಾಥ್ (34) ಮೃತ ದುರ್ದೈವಿ. ಮಂಜುನಾಥ್ ಆನ್ಲೈನ್ ಜೂಜಿಗೆ ಆಟ ಆಡಲು ಸ್ನೇಹಿತರಿಂದ ಬಡ್ಡಿಗೆ ಸಾಲ ಪಡೆದಿದ್ದನು. ಪಡೆದ ಸಾಲ ತೀರಿಸಲಾಗದೆ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಜುನಾಥ್ ಸೀಮೆ‌ಹಸುಗಳನ್ನು ಸಾಕಿಕೊಂಡು ಜೀವನ ಸಾಗಿಸುತ್ತಿದ್ದನು. ತಮ್ಮ ಮನೆಯ ಹಿಂಬದಿಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 am, Sun, 19 February 23

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ