AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಬೆಂಗಳೂರಿನ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅಜಿತ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಲಾಟೆ ನಡೆದಿದೆ.

ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ
ಚಾಕು ಇರಿದ ಸ್ಥಳ (ಎಡಚಿತ್ರ) ಆರೋಪಿ ಸುಮನ್​ (ಬಲಚಿತ್ರ)
TV9 Web
| Edited By: |

Updated on: Aug 27, 2023 | 8:39 AM

Share

ಬೆಂಗಳೂರು: ನಗರದ ಧರ್ಮರಾಯಸ್ವಾಮಿ (Dharmaswamy) ದೇವಸ್ಥಾನದ ಬಳಿ ಗಣೇಶ ಮೂರ್ತಿ (Ganesha Idol) ಕೂರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅಜಿತ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಗಾಲಾಟೆ ನಡೆದಿದ್ದು, ಆರೋಪಿ ಸುಮನ್ ಚಾಕುವಿನಿಂದ ಅಜಿತ್​ ಅವರ ​ಎದೆ, ಕುತ್ತಿಗೆ, ಬೆನ್ನಿಗೆ ಇರಿದಿದ್ದಾನೆ. ಹಲ್ಲೆಗೊಳಗಾದ ಅಜಿತ್​ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿ ಸುಮನ್​ನನ್ನು ಬಂಧಿಸಿದ್ದಾರೆ.

 ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ

ಶಿವಮೊಗ್ಗ: ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಟಿಪ್ಪು ನಗರದ ಏಳನೇ ತಿರುವಿನಲ್ಲಿ ನಡೆದಿದೆ. ಸುಮಾರು 57 ವರ್ಷದ ವ್ಯಕ್ತಿ ಕೊಲೆಯಾಗಿದ್ದಾರೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಒಡವೆ ಹಾಕೊಂಡು, ಸ್ಕಾರ್ಪಿಯೋ ವಾಹನದಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕದಿಯುತ್ತಿದ್ದ ಮತ್ತೊಂದು ಗ್ಯಾಂಗ್​ ಅರೆಸ್ಟ್​

ಬೈಕ್​ಗೆ ಡಿಕ್ಕಿ ಹೊಡೆದ ಕಾರು, ನಾಲ್ವರಿಗೆ ಗಾಯ

ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದು ಬೈಕ್​ನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಜಾಲದಿಂದ ಏರ್ಪೋರ್ಟ್ ರಸ್ತೆ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ದಂಪತಿಗೆ ಗಾಯವಾಗಿದೆ. ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ (ಆ.26) ಸಂಜೆ ನಾಲ್ಕು ಘಂಟೆ ಸುಮಾರಿಗೆ ಘಟನೆ ನಡೆದಿದೆ.

ಇಬ್ಬರು ಮಕ್ಕಳು ಹಾಗೂ ದಂಪತಿ ಬೈಕ್​​ನಲ್ಲಿ ಹೊರಟಿದ್ದರು. ಬೈಕ್​ ಚಾಲಕ ರಸ್ತೆ ಮಧ್ಯದ ಟ್ರ್ಯಾಕ್ ನಿಂದ ಬಲಗಡೆಗೆ ತಿರುವು ತೆಗೆದುಕೊಂಡಾಗ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕೂಡಲೇ ರಸ್ತೆ ಮೇಲೆ ಬಿದ್ದ ಮಕ್ಕಳನ್ನು ಇತರ ಸವಾರರು ರಕ್ಷಿಸಿದ್ದಾರೆ. ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಮಕ್ಕಳು ಹಾಗೂ ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!