AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ರುಂಡ ಪತ್ತೆ

ಗುರುವಾರ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಈ ಖುಷಿಯಲ್ಲಿದ್ದ ಮೀನಾ ಅಂದು ಸಂಜೆಯೇ ನಿರ್ಜನ ಪ್ರದೇಶದಲ್ಲಿ ಭೀಕರವಾಗಿ ಕೊಲೆಯಾಗಿದ್ದಾಳೆ. ಆಕೆಯ ರುಂಡ ಮತ್ತು ಮುಂಡ ಬೇರ್ಪಡಿಸಿ ವಿಕೃತಿ ಮೆರೆಯಲಾಗಿತ್ತು.

ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ರುಂಡ ಪತ್ತೆ
ವಿದ್ಯಾರ್ಥಿನಿ ಮೀನಾ, ಆರೋಪಿ ಪ್ರಕಾಶ್​
Gopal AS
| Edited By: |

Updated on:May 11, 2024 | 1:24 PM

Share

ಕೊಡಗು, ಮೇ 10: ಹತ್ಯೆಯಾದ ಸೋಮವಾರಪೇಟೆ (Somwarpet) ತಾಲೂಕಿನ ಸೂರ್ಲಬ್ಬಿ ಗ್ರಾಮದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾಳ (SSLC Student Mina) ರುಂಡ, ಕೊಲೆ ನಡೆದ ಸ್ಥಳದಿಂದ 300 ಮೀ ದೂರದ ಪೊದೆಯಲ್ಲಿ ಪತ್ತೆಯಾಗಿದೆ. ಮೀನಾಳನ್ನು ಕೊಲೆ ಮಾಡಿದ ಆರೋಪಿ ಪ್ರಕಾಶನನ್ನು ಇಂದು (ಮೇ 11) ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋದಾಗ ರುಂಡ ಇದ್ದ ಸ್ಥಳ ತೋರಿಸಿದ್ದಾನೆ.

ಬಲವಂತವಾಗಿ ಮೀನಾಳನ್ನು ಕರೆದೊಯ್ದು ಕೊಲೆ ಮಾಡಿದ ಆರೋಪಿ

ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮೀನಾ, ಈ ಕುಗ್ರಾಮದಲ್ಲಿ ಈ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ. ಆದರೆ ಆಕೆಯ ದುರಂತ ನೋಡಿ. ಒಂದು ಕಡೆ ಮೀನಾ ಮೇ.09ರಂದು ಎಸ್​ಎಸ್​ಎಲ್​ಸಿ ಪಾಸ್​ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೃತ ಮೀನಾ ಮನೆಯಿಂದ ನಾಲ್ಕು ಕಿ.ಮೀ ದೂರದಲ್ಲಿರುವ ಶಾಲೆಗೆ ತನ್ನ ಮನೆಯಿಂದ ಗುಡ್ಡ ಗಾಡು ರಸ್ತೆಯಲ್ಲಿ ನಿತ್ಯ ನಡೆದೇ ಸಾಗುತ್ತಿದ್ದಳು. ಪಾಠದಲ್ಲಿ ಮಾತ್ರವಲ್ಲ ಆಟದಲ್ಲೂ ಬಹಳ ಚೂಟಿ ಇದ್ದಳು. ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿದ್ದಳು. ಒಬ್ಬಳೇ ಆದ್ರೂ ಶಾಲೆಗೆ ಹೋಗ್ತಾಳಲ್ಲಾ ಅಂತ ಊರವರೆಲ್ಲಾ ಈಕೆಯ ಬಗ್ಗೆ ಹೆಮ್ಮೆ ಪಡ್ತಾ ಇದ್ರು. ಆದರೆ ಹದಿಹರೆಯದ ವಯಸ್ಸಿನಲ್ಲಿ ಈಕೆಗೆ ಲವ್​ ಆಗಿದೆ. 35 ವರ್ಷದ ಓಂಕಾರಪ್ಪ ಅಲಿಯಾಸ್ ಪ್ರಕಾಶ್ ಎಂಬುವವನ ಜೊತೆ ಮೀನಾಗೆ ಪ್ರೀತಿ ಬೆಳೆದಿತ್ತು.

ಇದನ್ನೂ ಓದಿ: ಬೆಂಗಳೂರು ತೃತೀಯ ಲಿಂಗಿ ಕೊಲೆ ಪ್ರಕರಣ: ಜೊತೆಗಿದ್ದ ಮಹಿಳೆ ಕೊಲೆ ಮಾಡಲು ಕಾರಣ ಇಲ್ಲಿದೆ

ಮೀನಾಳ ಗ್ರಾಮದಿಂದ ಮೂರು ಕಿ.ಮೀಟರ್ ದೂರದ ಹಮ್ಮಿಯಾಲ ಗ್ರಾಮದ ಪ್ರಕಾಶ್ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಅಷ್ಟೋ ಇಷ್ಟೋ ಸಂಪಾದನೆ ಮಾಡುತ್ತಿದ್ದ. ಅದು ಬಿಟ್ಟರೆ ಕಳೆದೊಂದು ವರ್ಷದಿಂದ ಮೀನಾಳ ಹಿಂದೆಯೇ ಸುತ್ತುತ್ತಿದ್ದ. ಇವರಿಬ್ಬರು ಪ್ರೀತಿಸ್ತಾ ಇದ್ದುದ್ದು ಇಡೀ ಊರಿಗೆ ಗೊತ್ತಿತ್ತು. ಇವರಿಬ್ಬರ ಆತ್ಮೀಯತೆ ಎಷ್ಟಿತ್ತೆಂದರೆ ಈತನೇ ತನ್ನ ಬೈಕಿನಲ್ಲಿ ಮೀನಾಳನ್ನ ಮನೆಯಿಂದ ಶಾಲೆಗೆ ಡ್ರಾಪ್ ಮಾಡುತ್ತಿದ್ದ. ಮೇ.09ರ ಎಸ್​ಎಸ್​ಎಲ್​ಸಿ ಫಲಿತಾಂಶದ ದಿನವೇ ಮೀನಾ ಹಾಗೂ ಪ್ರಕಾಶ್​​ಗೆ ನಿಶ್ಚಿತಾರ್ಥ ನೆರವೇರಿತ್ತು. ಬಂಧು ಮಿತ್ರರ ಎದುರು ಇಬ್ಬರು ಖುಷಿ ಖುಷಿಯಾಗಿಯೇ ಕೇಕ್​ ಕಟ್ ಮಾಡಿ ರಿಂಗ್ ಪಾಸ್ ಮಾಡಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ ಅಪ್ರಾಪ್ತೆಗೆ ಎಂಗೇಜ್ಮೆಂಟ್​ ನಡೆಯುತ್ತಿದೆ ಎಂಬ ಮಾಹಿತಿಯನ್ನ ಯಾರೋ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆ ಅಧಿಕಾರಿಗಳು ಮೀನಾಳ ಪೋಷಕರಿಗೆ ಈಗಲೇ ಮದುವೆ ಮಾಡದಂತೆ ತಿಳಿ ಹೇಳಿದ್ದಾರೆ.

ಮೀನಾಳಿಗೆ 18 ವರ್ಷ ತುಂಬಿದ ಬಳಿಕವೇ ವಿವಾಹ ಮಾಡುವಂತೆ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡು ಬಂದಿದ್ದಾರೆ. ಇಷ್ಟೆಲ್ಲ ಆದ ಬಳಿಕ ಪ್ರಕಾಶ್​ ಮರ ಕಡಿಯುವ ಮಚ್ಚಿನೊಂದಿಗೆ ಮೀನಾಳ ಮನೆಗೆ ಬಂದಿದ್ದು ಮೀನಾ ಹಾಗೂ ಅವಳ ಪೋಷಕರ ಜೊತೆ ಜಗಳವಾಡಿದ್ದಾನೆ. 18 ವರ್ಷ ಆಗುವವರೆಗೆ ಮದುವೆ ಬೇಡ ಎಂದು ಪೋಷಕರು ಹೇಳಿದ್ದು ಕೋಪಗೊಂಡು ಜಗಳ ಜೋರಾಗಿದೆ. ಇದರಿಂದ ಕುಪಿತಗೊಂಡ ಪ್ರಕಾಶ್ ಮಚ್ಚಿನಿಂದ ಮೊದಲು ತಾಯಿ ಜಾನಕಿಯ ಕೈ ಕಡಿದಿದ್ದಾನೆ, ಜಾನಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಡೆಯಲು ಬಂದ ತಂದೆ ಸುಬ್ರಮಣಿಗೆ ಜಾಡಿಸಿ ಒದ್ದ ರಭಸಕ್ಕೆ ಅವರೂ ಕುಸಿದು ಬಿದ್ದಿದ್ದಾರೆ. ಬಳಿಕ ಪ್ರಕಾಶ್, ಮೀನಾಳನ್ನ ಎಳೆದೊಯ್ದಿದ್ದಾನೆ. ಮನೆಯಿಂದ ಅಂದಾಜು 300 ಮೀಟರ್ ದೂರದವರೆಗೆ ಎಳೆದೊಯ್ದು ಮೀನಾಳ ಕುತ್ತಿಗೆಯನ್ನೇ ಕಡಿದು ರುಂಡ ಮುಂಡ ಬೇರ್ಪಡಿಸಿ ರುಂಡದೊಂದಿಗೆ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Sat, 11 May 24

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ