ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ
ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಸಂಕ್ರಮಣದ ಹಬ್ಬದಂದೇ ಭೀಕರ ಕೊಲೆ ನಡೆದಿದೆ. ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಎಸ್ಪಿ ಕನ್ನಿಕಾ ಸುಕ್ರಿವಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೋಲಾರ, ಜನವರಿ 15: ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ (murder) ನಡೆದಿರುವಂತಹ ಘಟನೆ ಕೋಲಾರ (Kolar) ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಸುಜಾತಾ(27)ರನ್ನು ಚಿರಂಜೀವಿ ಕೊಲೆಗೈದಿದ್ದಾನೆ. ಕಳೆದ ಕೆಲವು ದಿನಗಳಿಂದ ಇಬ್ಬರ ಪ್ರೀತಿಯಲ್ಲಿ ವಿರಸ ಉಂಟಾಗಿದ್ದು, ಅದುವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಸದ್ಯ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಕೊಲೆಯಾದ ಸುಜಾತಾ ಬಂಗಾರಪೇಟೆಯ ಮಾರುತಿ ನಗರದ ನಿವಾಸಿ. ಕಳೆದ ಮೂರು ತಿಂಗಳಿಂನಿಂದ ಬೆಲ್ರೈಸ್ ಕಂಪನಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಚಿರಂಜೀವಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸ್ತ್ರೀ ಸಂಘಗಳ ಮುಖಾಂತರ ಸಾಲ ನೀಡಿ ಹಣ ವಸೂಲಿ ಮಾಡುತ್ತಿದ್ದ, ಈ ವೇಳೆ ಪರಿಚಯವಾಗಿತ್ತು.
ಅಳಲು ತೊಡಿಕೊಂಡ ತಂದೆ
ಈ ಬಗ್ಗೆ ಸುಜಾತಾ ತಂದೆ ಕೃಷ್ಣಮೂರ್ತಿ ಪ್ರತಿಕ್ರಿಯಿಸಿದ್ದು, ಈ ಹಿಂದೆಯೂ ಹಣಕಾಸು ವಿಚಾರಕ್ಕೆ ಸುಜಾತಾ ಮೇಲೆ ಚಿರಂಜೀವಿ ಹಲ್ಲೆ ಮಾಡಿದ್ದ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ರಮಕೈಗೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಈಗ ನನ್ನ ಮಗಳ ಕೊಲೆ ಮಾಡಿಬಿಟ್ಟ. ಆಗಲೇ ಸರಿಯಾದ ಕ್ರಮಕೈಗೊಂಡಿದ್ದರೆ ಇಂದು ನನ್ನ ಮಗಳು ಬದುಕಿರುತ್ತಿದ್ದಳು ಎಂದು ಕೃಷ್ಣಮೂರ್ತಿ ಅಳಲು ತೊಡಿಕೊಂಡಿದ್ದಾರೆ.
ಇದನ್ನೂ ಓದಿ: ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಇನ್ನು ಸ್ಥಳಕ್ಕೆ ಕೋಲಾರ ಎಸ್ಪಿ ಕನ್ನಿಕಾ ಸುಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೋಕೋ ತಂಡ ಶವವನ್ನು ಕೋಲಾರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಆರೋಪಿಗೆ ಸ್ಥಳೀಯರು ಥಳಿತ ಹಿನ್ನೆಲೆ ಆತನಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನ ಕೊಲೆ
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನ ಕೊಲೆ ಮಾಡಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿದೆ. ಮೂವರು ಅಪ್ರಾಪ್ತರಿಂದ ನಿಂಗರಾಜ್ ಅವಾರಿ(16) ಕೊಲೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ
ನಿಂಗರಾಜ್ ಅನುದಾನಿತ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಅಪ್ರಾಪ್ತ ಬಾಲಕನ ಕೊಲೆ ಮಾಡಲಾಗಿದೆ. ಕೃತ್ಯವೆಸಗಿದ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
