ಕೋಲಾರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಜೈಲುಶಿಕ್ಷೆ

ಕೋಲಾರದ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ.

ಕೋಲಾರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಜೈಲುಶಿಕ್ಷೆ
ಕೋಲಾರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ

Updated on: Jun 03, 2023 | 9:40 PM

ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ (Rape Case) ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಮುರುಗೇಶ್​ಗೆ 30 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ದೇವೆಮಾನೆ ಅವರು ಆದೇಶಿಸಿದ್ದಾರೆ.

2022 ರ ಅಕ್ಟೋಬರ್ 9ರಂದು ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮುರುಗೇಶ್ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ಮುಳಬಾಗಲು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ‌ ದಾಖಲಿಸಿಕೊಂಡಿದ್ದರು. ಸದ್ಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದೇವೆಮಾನೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಪರಿಶೀಲಿಸಲು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ತಡೆ

ಇತ್ತೀಚೆಗಷ್ಟೇ, ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಎಫ್​ಟಿಎಸ್​ಪಿ (ಪೋಕ್ಸೋ ಕೋರ್ಟ್​) ತೀರ್ಪು ನೀಡಿತ್ತು. ಈ ಅಪರಾಧಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಬಟ್ಟೆ ಹಾಗೂ ತಿಂಡಿ ಕೊಡುತ್ತಾ ಮಗಳ‌ ಮೇಲೆ ಅತ್ಯಾಚಾರ ಮಾಡುತ್ತಿದ್ದ. ವಿಚಾರ ತಿಳಿದ ನಂತರ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್, ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Sat, 3 June 23