ಕೋಲಾರದಲ್ಲಿ ನಕಲಿ ವೈದ್ಯರ ಹಾವಳಿಗೆ ಹೋಯ್ತು 8 ವರ್ಷದ ಬಾಲಕಿಯ ಜೀವ!

ಕೋಲಾರದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದ್ದು, ರೋಗಿಗಳ ಜೀವದ ಜೊತೆ ಆಟವಾಡುತ್ತಿದ್ದಾರೆ. ಕೋಲಾರದ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು 8 ವರ್ಷದ ಬಾಲಕಿ ಈ ನಕಲಿ ವೈದ್ಯರ ಕಾಟಕ್ಕೆ ಬಲಿಯಾಗಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದಲೇ ಮಗು ಸಾವನ್ನಪ್ಪಿದೆ ಎಂದು ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲಿ ನಕಲಿ ವೈದ್ಯರ ಹಾವಳಿಗೆ ಹೋಯ್ತು 8 ವರ್ಷದ ಬಾಲಕಿಯ ಜೀವ!
Kolar Girl Death
Updated By: ಭಾವನಾ ಹೆಗಡೆ

Updated on: Oct 03, 2025 | 11:34 AM

ಕೋಲಾರ, ಅಕ್ಟೋಬರ್ 3: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕಾಟ ಹೆಚ್ಚುತ್ತಿದೆ. ಯಾವುದೇ ವೈದ್ಯಕೀಯ ಪದವಿಯಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಜನರ ಜೀವಕ್ಕೇ ಕುತ್ತು ಬಂದಿದೆ  ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು ದುರ್ಘಟನೆ ನಡೆದಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ಹೋದ ಬಾಕಿಯೊಬ್ಬಳು ವೈದ್ಯರ ಚಿಕಿತ್ಸೆಯಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆಕೆಗೆ ಚಿಕಿತ್ಸೆ ನೀಡಿದವರು ನಕಲಿ ವೈದ್ಯರೆಂದು ಹೇಳಲಾಗುತ್ತಿದೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ವರ್ಷದ ಬಾಲಕಿಯ ಸಾವಿಗೆ ಕಾರಣವೇನು?

ದೊಡ್ಡಿಗಲ್ಲೂರು ಗ್ರಾಮದ 8 ವರ್ಷದ ಬಾಲಕಿಯೊಬ್ಬಳು ಜ್ವರದಿಂದ ಬಳಲುತ್ತಿದ್ದಾಗ ಪೋಷಕರು ಸಂತೆಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕ್ಲಿನಿಕ್​ನಲ್ಲಿ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಗೆ ಚಿಕತ್ಸೆ ಮಾಡಿದವರು ನಕಲಿ ವೈದ್ಯರೆಂದು ತಿಳಿದುಬಂದಿದ್ದು, ಅವರು ಕೊಟ್ಟ ಇಂಜೆಕ್ಷನ್ ಪರಿಣಾಮವಾಗಿಯೇ ಬಾಲಕಿ ಸಾವನ್ನಪ್ಪಿದ್ದಾಳೆಂದು ಆರೋಪ ಕೇಳಿಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಪ್ರಕರಣ ದಾಖಲಾಗಿದೆ.

ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕ್ಲಿನಿಕ್​ಗೆ ಬೀಗ

ಸುಮಾರು 3 ವರ್ಷಗಳ ಹಿಂದೆ ಇದೇ ಕೋಲಾರ ಜಿಲ್ಲೆಯಲ್ಲಿ 3 ಕ್ಲಿನಿಕ್​ಗಳ ಮೇಲೆ ತಹಶೀಲ್ದಾರರು ದಾಳಿ ಮಾಡಿದ್ದರು. ಸೂಕ್ತ ದಾಖಲೆಗಳಿಲ್ಲದ ಕಾರಣ ನಕಲಿ ವೈದ್ಯರ 3 ಕ್ಲಿನಿಕ್​ಗಳನ್ನೂ ಮುಚ್ಚಲಾಗಿತ್ತು. ಬೆಂಗಳೂರಿನಲ್ಲಿಯೂ ಕೋರಮಂಗಲದಲ್ಲಿ ಆಯುರ್ವೇದ ಓದಿಕೊಂಡಿದ್ದ ವೈದ್ಯರೊಬ್ಬರು ಕಳೆದ 10 ವರ್ಷಗಳಿಂದಲೂ ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಬಯಲಾಗಿತ್ತು. ಅದರೊಂದಿಗೆ ಚರ್ಮ ಶಾಸ್ತ್ರದ ಬಗ್ಗೆ ಓದದೇ ಇರುವವರೂ ಬ್ಯೂಟಿ ಟ್ರೀಟ್ಮೆಂಟ್ ನೀಡುತ್ತಿದ್ದರು.

ಇದನ್ನೂ ಓದಿ ಬೆಂಗಳೂರಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ನಕಲಿ ವೈದ್ಯರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಪ್ಲ್ಯಾನ್ ಇದು

ಹೀಗೆ ಬೆಂಗಳೂರು, ಕಲಬುರಗಿ, ಬೆಳಗಾವಿ ಸೇರಿದಂತೆ 100 ಕ್ಕೂ ಹೆಚ್ಚು ನಕಲಿ ವೈದ್ಯರ ಹೆಸರು ಬೆಳಕಿಗೆ ಬಂದಿತ್ತು. ಇವರೆಲ್ಲರ ವಿರುದ್ಧ ಕ್ರಮ ಕೈಗೊಂಡು,ದಂಡ ವಿಧಿಸಿದ್ದರು.ಅಷ್ಟೇ ಅಲ್ಲದೇ ಕೆಲವು ಕ್ಲಿನಿಕ್​ಗಳಿಗೆ ಬೀಗ ಹಾಕಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ