AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಇದ್ದೊಬ್ಬ ಮಗನನ್ನು ಕಳೆದುಕೊಂಡು ಕಂಗಾಲಾದ ಕುಟುಂಬ

ಅವರಿಬ್ಬರೂ ಸ್ನೇಹಿತರು, ಇಬ್ಬರು ಜೀವಕ್ಕೆ ಜೀವ ಕೊಡುವಂತೆ ಇದ್ದರು. ಆದ್ರೆ, ಹಣದ ವಿಚಾರ ಬಂದಾಗ ಸ್ವೇಹಿತ ದುಷ್ಮನ್ ಆಗಿದ್ದ. ಹಣ ಕೊಡುತ್ತೇನೆ ಎಂದು ಹೇಳಿ ಕರೆದುಕೊಂಡು ಬಂದು ಬೆಟ್ಟದ ಮೇಲೆ ದೂಡಿ ಕೊಲೆ ಮಾಡಿದ್ದಾನೆ. ಮನೆಗೆ ಆಧಾರವಾಗಿದ್ದ ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.

ಕೊಪ್ಪಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಇದ್ದೊಬ್ಬ ಮಗನನ್ನು ಕಳೆದುಕೊಂಡು ಕಂಗಾಲಾದ ಕುಟುಂಬ
ಕೊಪ್ಪಳ ಯುವಕ ಕೊಲೆ ಪ್ರಕರಣ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 19, 2023 | 4:53 PM

Share

ಕೊಪ್ಪಳ, ಡಿ.19: ನಗರದ ಹೊರವಲಯದ ಮಳೆ ಮಹದೇಶ್ವರ ಬೆಟ್ಟದಲ್ಲಿ ಯುವಕನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಕೊಪ್ಪಳ(Koppala) ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.‌ ನಂತರ ಮೃತ ಯುವಕನ ಹೆಸರು ಬಸವರಾಜ್ ಹೊಸಮನಿ ಎಂದು ಗೊತ್ತಾಗಿದೆ. ಇಪ್ಪತ್ತೆರಡು ವರ್ಷದ ಬಸವರಾಜ್, ಕೊಪ್ಪಳ ತಾಲೂಕಿನ ಮೋರನಾಳ್ ಗ್ರಾಮದ ನಿವಾಸಿ. ಗ್ರಾಮದಲ್ಲಿಯೇ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ. ಕಳೆದ ಶುಕ್ರವಾರ(ಡಿ.15) ಸ್ನೇಹಿತನ ಜೊತೆ ಕುರಿ ಸಂತೆಗೆ ಹೋಗಿ ಬರುತ್ತೇನೆಂದು ಬೈಕ್ ಮೇಲೆ ಹೋಗಿದ್ದ ಬಸವರಾಜ್, ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬ ಕಂಗಾಲಾಗಿತ್ತು. ಅನೇಕ ಕಡೆ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದ್ರೆ, ಬಸವರಾಜ್ ಬದುಕಿಲ್ಲ, ಬಾರದ ಲೋಕಕ್ಕೆ ಹೋಗಿದ್ದಾನೆ ಎಂದು ನಿನ್ನೆ(ಡಿ.18) ಸಂಜೆ ಕುಟುಂಬದವರಿಗೆ ಗೊತ್ತಾಗಿದೆ. ಆದ್ರೆ, ತಮ್ಮ ಮಗನದ್ದು ಸಹಜ ಸಾವಲ್ಲ,  ಬದಲಾಗಿ ಕೊಲೆ ಅಂತ ಕುಟುಂಬದವರು ಆರೋಪಿಸಿದ್ದಾರೆ.

ಮೃತ ಬಸವರಾಜ್, ಅದೇ ಗ್ರಾಮದ ಮತ್ತೋರ್ವ ಯುವಕ ಬಸಪ್ಪನ ಜೊತೆ ಆತ್ಮೀಯ ಸ್ನೇಹ ಹೊಂದಿದ್ದನಂತೆ. ತನ್ನ ಬಳಿಯಿದ್ದ ಕುರಿಗಳನ್ನು ಮೇಯಿಸಲು ಸ್ನೇಹಿತ ಬಸಪ್ಪಗೆ ನೀಡಿದ್ದನಂತೆ. ಆದರೆ, ಸ್ನೇಹಿತ ಬಸಪ್ಪ ಕುರಿಗಳನ್ನು 42 ಸಾವಿರಕ್ಕೆ ಮಾರಾಟ ಮಾಡಿಕೊಂಡು, ಈ ಪೈಕಿ ಹನ್ನೆರಡು ಸಾವಿರ ನೀಡಿದ್ದನಂತೆ. ಉಳಿದ ಹಣವನ್ನು ನೀಡದೆ ಸ್ನೇಹಿತ ಬಸಪ್ಪ ಸತಾಯಿಸಿದ್ದನಂತೆ. ಹೀಗಾಗಿ ಕಳೆದ ಶುಕ್ರವಾರ ಕುಕನಪಳ್ಳಿಗೆ ಹೋಗೋಣಾ,‌ ಅಲ್ಲಿ ನಿನ್ನ ದುಡ್ಡು ಕೊಡುತ್ತೇನೆ. ನಂತರ ಸಂತೆ ಮಾಡಿಕೊಂಡು ಬರೋಣಾ ಎಂದು ಬಸವರಾಜ್​ನನ್ನು ಸ್ನೇಹಿತ ಕರೆದುಕೊಂಡು ಬಂದಿದ್ದನಂತೆ.

ಇದನ್ನೂ ಓದಿ:ಮಂಡ್ಯ: ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ; ರಾಡ್​​ನಿಂದ ಹೊಡೆದು ಪತ್ನಿಯ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಆದರೆ, ಬಸಪ್ಪ ಒಬ್ಬನೇ ಮರಳಿ ಮನೆಗೆ ಹೋಗಿದ್ದ. ಹೀಗಾಗಿ ಅನುಮಾನಗೊಂಡ ಕುಟುಂಬದವರು ಕೇಳಿದಾಗ ಆತ ಕೊಪ್ಪಳದಿಂದ ಎಲ್ಲಿ ಹೋಗಿದ್ದಾನೆ ಎಂದು ಗೊತ್ತಿಲ್ಲವೆಂದು ಹೇಳಿದ್ದನಂತೆ. ಹೀಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಿದಾಗ ಬಸವರಾಜ್ ಎಲ್ಲಿದ್ದಾನೆ ಎಂದು ಗೊತ್ತಾಗಿರಲಿಲ್ಲ. ಆದ್ರೆ, ನಿನ್ನೆ ಸಂಜೆ ಬಸವರಾಜ್​ನ ಶವ, ಕೊಳೆತು ವಾಸನೆ ಬಂದಾಗ ಗೊತ್ತಾಗಿದೆ. ಸದ್ಯ ಬಸವರಾಜ್ ಕೊಲೆಗೆ ಸಂಬಂಧಿಸಿದಂತೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಸಪ್ಪ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ. ಆದ್ರೆ, ಆರೋಪಿ ಸಿಕ್ಕ ಮೇಲೆ ಕೊಲೆಗೆ ಕಾರಣ ಗೊತ್ತಾಗಲಿದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಬಾರದ ಲೋಕಕ್ಕೆ ಹೋಗಿದ್ದು ಮಾತ್ರ ದುರ್ದೈವದ ಸಂಗತಿಯಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 19 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ