AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಪತಿಯನ್ನು ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರ, ಐವರು ಆರೋಪಿಗಳು ಅರೆಸ್ಟ್​

ಪತಿಯನ್ನು ಹುಡುಕಿಕೊಂಡು ಬೆಂಗಳೂರಿನಿಂದ ಗಂಗಾವತಿಗೆ ಹೋಗಿದ್ದ 21 ವರ್ಷದ ಮಹಿಳೆ ಮೇಲೆ ಗಂಗಾವತಿ ಬಸ್​ ನಿಲ್ದಾಣ ಬಳಿಯ ಪಾರ್ಕ್​​​ವೊಂದರಲ್ಲಿ ದುಷ್ಕರ್ಮಿ ಅತ್ಯಾಚಾರವೆಸಗಿದ್ದಾನೆ. ಅತ್ಯಾಚರವೆಸಗಿದ ಆರೋಪಿ ಲಿಂಗರಾಜ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಕೃತ್ಯಕ್ಕೆ ಸಹಕಾರ ನೀಡಿದ ಐವರನ್ನು ಗಂಗಾವತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ: ಪತಿಯನ್ನು ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರ, ಐವರು ಆರೋಪಿಗಳು ಅರೆಸ್ಟ್​
ಗಂಗಾವತಿ ಪೊಲೀಸ್​ ಠಾಣೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 12, 2024 | 11:11 AM

Share

ಕೊಪ್ಪಳ, ಫೆಬ್ರವರಿ 12: ಗಂಗಾವತಿ (Gangavathi) ಬಸ್​ ನಿಲ್ದಾಣ ಬಳಿಯ ಪಾರ್ಕ್​​​ವೊಂದಕ್ಕೆ 21 ವರ್ಷದ ಮಹಿಳೆಯನ್ನು (Woman) ಎಳೆದೊಯ್ದು ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರವೆಸಗಿದ ಆರೋಪಿ ಲಿಂಗರಾಜ್​ಗಾಗಿ ಪೊಲೀಸರು (Police) ಬಲೆ ಬೀಸಿದ್ದಾರೆ. ಇನ್ನು ಕೃತ್ಯಕ್ಕೆ ಸಹಕಾರ ನೀಡಿದ ಐವರನ್ನು ಗಂಗಾವತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೌಲಾಹುಸೇನ್, ಶಿವಕುಮಾರ್, ಪ್ರಶಾಂತ್, ಮಹೇಶ್, ಮಾದೇಶ್ ಬಂಧಿತ ಆರೋಪಿಗಳು.

ಸಂತ್ರಸ್ತೆ ಬೆಂಗಳೂರಿನ ಗೊರಗುಂಟೆಪಾಳ್ಯದವರಾಗಿದ್ದು, ಆಕೆಯ ಪತಿ ಗಂಗಾವತಿಯವರು. ಸಂತ್ರಸ್ತೆ ಮತ್ತು ಆಕೆಯ ಪತಿ ಪ್ರೇಮ ವಿವಾಹವಾಗಿದ್ದಾರೆ. ಗಂಡನನ್ನು ಭೇಟಿಯಾಗಲು ಸಂತ್ರಸ್ತೆ ಗಂಗಾವತಿಗೆ ಬಂದಿದ್ದಳು. ಫೆಬ್ರವರಿ 9 ರಂದು ರಾತ್ರಿ 9:30 ರ ಸುಮಾರಿಗೆ ಸಂತ್ರಸ್ತೆ ಮತ್ತು ಆಕೆಯ ಪತಿ ಗಂಗಾವತಿ ಬಸ್ ನಿಲ್ದಾಣದಲ್ಲಿ ಕೌಟುಂಬಿಕ ವಿಚಾರವಾಗಿ ಜಗಳವಾಡುತ್ತಿದ್ದರು.

ಇದನ್ನು ಗಮನಿಸಿದ ಆರು ಮಂದಿಯ ಗ್ಯಾಂಗ್ ದಂಪತಿ ಮೇಲೆ ಕಣ್ಣಿಟ್ಟಿದೆ. ಜಗಳ ತೀವ್ರವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ತಂಡ ಸಂತ್ರಸ್ತೆಯ ಪತಿಗೆ ಥಳಿಸಿದೆ. ಅಲ್ಲದೆ ಮಹಿಳೆಗೆ ಸಹಾಯ ಮಾಡಿದಂತೆ ವರ್ತಿಸಿದ್ದಾರೆ. ಸಂತ್ರಸ್ತೆಯ ಗಂಡನನ್ನು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ಕರೆದೊಯ್ದಿದ್ದಾರೆ. ದುಷ್ಕರ್ಮಿಗಳು ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಸ್ ನಿಲ್ದಾಣದ ಬಳಿಯ ಉದ್ಯಾನವನಕ್ಕೆ ಎಳೆದೊಯ್ದಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಯುವತಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್​​

ಆರು ಆರೋಪಿಗಳಲ್ಲಿ ಒಬ್ಬನಾದ ಲಿಂಗರಾಜ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಉಳಿದ ಐವರು ಆರೋಪಿಗಳು ಕೃತ್ಯಕ್ಕೆ ಸಹಕಾರ ನೀಡಿದ್ದಾರೆ. ಘಟನೆಯ ನಂತರ ಆರೋಪಿಗಳು ಸಂತ್ರಸ್ತೆಯನ್ನು ಪಾರ್ಕ್‌ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಸಂತ್ರಸ್ತೆ ಗಂಗಾವತಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಲಿಂಗರಾಜ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಬಂಧಿತರನ್ನು ಮೌಲಾ ಹುಸೇನ್, ಶಿವಕುಮಾರ್, ಪ್ರಶಾಂತ್, ಮಹೇಶ್ ಮತ್ತು ಮಾದೇಶ್ ಎಂದು ಗುರುತಿಸಲಾಗಿದೆ. ಪೊಲೀಸರು ಲಿಂಗರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ