AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL ನೇಮಕಾರಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

KPTCL ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

KPTCL ನೇಮಕಾರಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
ಕೆಪಿಟಿಸಿಎಲ್
TV9 Web
| Updated By: Rakesh Nayak Manchi|

Updated on:Dec 15, 2022 | 8:39 AM

Share

ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಕಿರಿಯ ಸಹಾಯಕ ಹುದ್ದೆ ಪರೀಕ್ಷೆ (KPTCL Junior Assistant Post Exam)ಯಲ್ಲಿ ನಡೆದ ಅಕ್ರಮ ಪ್ರಕರಣ (Illegal Case)ದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಗೋಕಾಕ್​ ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಬಾಗ ತಾಲೂಕಿನ ಕೋಳಿಗುಡ್ಡ ನಿವಾಸಿ ಸೋಮನಗೌಡ ಪಾಟೀಲ್ (36) ಬಂಧಿತ ಆರೋಪಿಯಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆ (Question paper leak) ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ್ದ ಆರೋಪ ಸೋಮನಗೌಡನ ಮೇಲಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಕ್ರಮ ಪ್ರಕರಣ ಸಂಬಂಧ ಈವರೆಗೆ ಪೊಲೀಸರು 35 ಮಂದಿಯನ್ನು ಬಂಧಿಸಿದ್ದಾರೆ.

ಗದಗ ಮುನ್ಸಿಪಾಲ್ ಪಿಯು ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋಣಾವನೆ ಪುತ್ರನ ಜೊತೆಗೆ ಆರೋಪಿ ಸೋಮನಗೌಡ ಡೀಲ್ ಕುದುರಿಸಿದ್ದನು. ಅಭ್ಯರ್ಥಿಗಳಿಂದ 7.10 ಲಕ್ಷ ಪಡೆದು ಅದರಲ್ಲಿ 4.50 ಲಕ್ಷ ರೂ. ಸೋಣಾವನೆ ಪುತ್ರ ಸುಮಿತ್‌ಕುಮಾರ್‌ಗೆ ನೀಡಿದ್ದನು. ಅದರಂತೆ ಆ.7 ರಂದು ಸೋಮನಗೌಡನ ವಾಟ್ಸ್​​ಆ್ಯಪ್​ಗೆ ಸುಮಿತ್ ಕುಮಾರ್ ಪ್ರಶ್ನೆ ಪತ್ರಿಕೆ ಕಳುಹಿಸಿದ್ದನು. ಈ ಆರೋಪದ ಮೇಲೆ ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋನವಣೆ ಮಗ ಸುಮಿತ್‌ಕುಮಾರ್‌‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮಿಸ್ಸೌರಿಯಲ್ಲಿನ ಮನೆಯೊಂದರಿಂದ 30 ವರ್ಷಗಳ ಹಿಂದೆ ರಾತ್ರೋರಾತ್ರಿ ಕಣ್ಮರೆಯಾದ ಮೂವರು ಮಹಿಳೆಯರು ಇನ್ನೂ ಪತ್ತೆಯಾಗಿಲ್ಲ!

ಏನಿದು ಪ್ರಕರಣ?

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆ ಆ.7ರಂದು ಗೋಕಾಕ್​ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಆರಂಭದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಿದ್ದ ಪೊಲೀಸರು ಇದೀಗ ಒಟ್ಟು 35 ಮಂದಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Thu, 15 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ