ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ಬಿರಣಗಡ್ಡಿ ಗ್ರಾಮದ ಬಸವರಾಜ ದುಂದನಟಿ, ಮೂಡಲಗಿ ತಾಲೂಕಿನ ಅರಭಾವಿ ಗ್ರಾಮದ ಅಕ್ಷಯ ಭಂಡಾರಿ ಮತ್ತು ರಾಜಾಪುರ ಗ್ರಾಮದ ಶ್ರೀಧರ್ ಲಕ್ಕಪ್ಪ ಕಟ್ಟಿಕಾರ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಬಂಧಿತರಿಂದ ಮೊಬೈಲ್ಗಳು, 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ಗಳು, 18 ಮಾಡಿಫಾಯ್ಡ್ ಡಿವೈಸ್, ಬೈಕ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿ ಅಕ್ಷಯ್ ಬಂಡಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್ ತಂದು ಪ್ರಕರಣದ ಕಿಂಗ್‌ಪಿನ್ ಸಂಜು ಭಂಡಾರಿಗೆ ನೀಡಿದ್ದ. ಈತನಿಂದ ಪೊಲೀಸರು ಮೊಬೈಲ್, 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಪಾಯ್ ಡಿವೈಸ್ ಜಪ್ತಿ ಮಾಡಿದ್ದಾರೆ. ಮತ್ತೋರ್ವ ಬಂಧಿತತ ಬಸವರಾಜ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿ ಅಕ್ರಮದಲ್ಲಿ ಭಾಗಿಯಾಗಿದ್ದನು. ಈತನಿಂದ ಮೊಬೈಲ್, ಮೋಟಾರ್ ಸೈಕಲ್ ಜಪ್ತಿ ಮಾಡಲಾಗಿದೆ. ಮಗದೊಬ್ಬ ಬಂಧಿತ ಆರೋಪಿ ಶ್ರೀಧರ್ ಲಕ್ಕಪ್ಪ, ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟಿದ್ದನು. ಸದ್ಯ ಇನಿಂದ ಪೊಲೀಸರು 1 ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಏನಿದು ಪ್ರಕರಣ?
ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆ ಆ.7ರಂದು ಗೋಕಾಕ್ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಅ.22ರಂದು 9 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅ.24ರಂದು ಮೂವರನ್ನು ಬಂಧಿಸಿದ್ದರು. ಸೆ.2ರಂದು ಪ್ರಮುಖ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ