ಮೈಸೂರು: ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​​ ಸುಂದ್ರಿ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದವ ಅಂದರ್

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿದ್ದಾರೆ. ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದನು. ಪೊಲೀಸರು ದಾಳಿ ಮಾಡಿ ಏಳು ಜನರನ್ನು ಬಂಧಿಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಪ್ರತಿ ಗ್ರಾಹಕರಿಂದ 8-10 ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.

ಮೈಸೂರು, ಜನವರಿ 26: ಮೈಸೂರಿನಲ್ಲಿ (Mysore) ಹೈಟೆಕ್ ವೇಶ್ಯಾವಾಟಿಕೆ (Prostitution) ಜಾಲ ಪತ್ತೆಯಾಗಿದೆ. ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​ನಿಂದ ಯುವತಿಯನ್ನು ಕರೆತಂದು ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್​ನಲ್ಲಿ​ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವನನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರತನ್ ಬಂಧಿತ ಆರೋಪಿ.

ಆರೋಪಿ ರತನ್​ ಕೆಎಸ್​​ಆರ್​​ಟಿಸಿ ನೌಕರಿ ಬಿಟ್ಟು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು. ವೈಶ್ಯಾವಾಟಿಕೆಗಾಗಿ ಥೈಲ್ಯಾಂಡ್​ನಿಂದ​​ ಯುವತಿಯನ್ನು ಕರೆಸಿದ್ದನು. ರತನ್ ನಡೆಸುತ್ತಿದ್ದ ವೇಶ್ಯಾವಾಟಿಕೆಗೆ ರೇವಣ್ಣ ಎಂಬಾತ ಸಾಥ್ ನೀಡಿದ್ದನು. ಆರೋಪಿ ರತನ್​ ​ಪ್ರತಿ ಗಿರಾಕಿಯಿಂದ 8-10 ಸಾವಿರ ರೂ. ವಸೂಲಿ ಮಾಡುತ್ತಿದ್ದನು. ಈ ಮಾಹಿತಿ ತಿಳಿದ ಸರಸ್ವತಿಪುರಂ ಠಾಣೆ ಪೊಲೀಸರು, ಶನಿವಾರ ಹೊಟೇಲ್​ ಮೇಲೆ ದಾಳಿ ಮಾಡಿ, ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಆರೋಪಿ ರತನ್​ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೆಆರ್ ಮಾರ್ಕೆಟ್ ಬಳಿ ಮಹಿಳೆಯ ರೇಪ್, ಚಿನ್ನಾಭರಣ, ಹಣ ದೋಚಿದ ದುಷ್ಕರ್ಮಿಗಳು

ಇನ್ನು, ಥೈಲ್ಯಾಂಡ್​ನಿಂದ​​ ಬಂದ ಯುವತಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಬ್ಯುಸಿನೆಸ್ ಪರ್ಪಸ್​ಗೆ ಬಂದಿದ್ದಾಗಿ ಹೇಳಿದ್ದಳು. ಒಂದು ದಿನದ ಹಿಂದೆಯಷ್ಟೇ ಮೈಸೂರಿಗೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Sun, 26 January 25

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us