ಮೈಸೂರು ಕೆಎಸ್ಆರ್​​ಪಿ ವಸತಿ ಗೃಹದಲ್ಲಿ ಮಹಿಳಾ ಕಾನ್ಸಟೇಬಲ್ ನೇಣಿಗೆ ಶರಣು

|

Updated on: Feb 22, 2023 | 8:18 AM

ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ.

ಮೈಸೂರು ಕೆಎಸ್ಆರ್​​ಪಿ ವಸತಿ ಗೃಹದಲ್ಲಿ ಮಹಿಳಾ ಕಾನ್ಸಟೇಬಲ್ ನೇಣಿಗೆ ಶರಣು
ಮೃತ ಮಹಿಳಾ ಕಾನ್ಸಟೇಬಲ್​ ಗೀತಾ
Follow us on

ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ (Lady Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ (Mysore) ಕೆಎಸ್​ಆರ್​​ಪಿ (KSRP) ವಸತಿಗೃಹದ ಮನೆಯಲ್ಲಿ ನಡೆದಿದೆ. ಗೀತಾ (32) ಮೃತ ದುರ್ದೈವಿ. ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ನಿನ್ನೆ (ಫೆ.19) ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ. ಹೀಗೆ ಹೋದ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಆಟೋ ಬೆಂಕಿಗಾಹುತಿ

ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಆಟೋಕ್ಕೆ ಬೆಂಕಿ ತಗುಲಿದ ಘಟನೆ ಮೈಸೂರಿನ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ. ರವೀಂದ್ರ ಎಂಬುವವರಿಗೆ ಸೇರಿದ ಆಟೋ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಾರೋ ದ್ವೇಷದಿಂದ ಆಟೋಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Wed, 22 February 23