ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದು ದೊಡ್ಡ ದೊಡ್ಡ ಸೀರೆ ಶೋರೂಂಗಳನ್ನು ಟಾರ್ಗೆಟ್​ ಮಾಡಿ ಲಕ್ಷಾಂತರ ಮೌಲ್ಯದ ಸೀರೆಗಳನ್ನು ಕಳುವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕೈ ಚಳಕದಿಂದ ಸೀರೆ ಕಳೆದುಕೊಂಡು ಶೋರಂ ಮಾಲಿಕರು ಕಂಗಾಲ ಆಗಿದ್ದಾರೆ.

ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ
ಹೈಗ್ರೌಂಡ್ಸ್​​ ಪೊಲೀಸ್​ ಠಾಣೆ
Follow us
| Updated By: ವಿವೇಕ ಬಿರಾದಾರ

Updated on:Aug 23, 2023 | 12:57 PM

ಬೆಂಗಳೂರು: ಲಕ್ಷಾಂತರ ಮೌಲ್ಯದ ಸೀರೆಗಳನ್ನೇ (Saree) ಕಳವು ಮಾಡುತ್ತಿದ್ದ ಗ್ಯಾಂಗ್ ಅನ್ನು ಹೈಗ್ರೌಂಡ್ಸ್ ಪೊಲೀಸರು (Police) ಬಂಧಿಸಿದ್ದಾರೆ. ಸುನೀತಾ, ಮಟ್ಟಪತಿ ರಾಣಿ, ರತ್ನವೇಲು, ತಣ್ಣೀರ್ ಶಿವಕುಮಾರ್, ಶಿವರಾಮ್ ಪ್ರಸಾದ್, ವೆಂಕಟೇಶ್ ಮತ್ತು ಭರತ್ ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳ ಬಳಿ ಇದ್ದ ಲಕ್ಷಾಂತರ ಮೌಲ್ಯದ ಸಿಲ್ಕ್ ಸೀರೆಗಳನ್ನು ಜಪ್ತಿ ಮಾಡಿದ್ದಾರೆ. ಈ ಗ್ಯಾಂಗ್​​ನಲ್ಲಿ 11 ಜನರಿದ್ದು, ಸದ್ಯ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. ಇನ್ನು ನಾಲ್ವರಿಗಾಗಿ ಬಲೆ ಬೀಸಿದ್ದಾರೆ.

ಈ ಗ್ಯಾಂಗ್​ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದು ಕಳ್ಳತನ ಮಾಡುತ್ತಿತ್ತು. ಈ ಬಗ್ಗೆ ನಗರದ ಆಶೋಕನಗರ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು.

ಆರೋಪಿಗಳು ಮದುವೆ ಇದೆ ಅಂತ ಹೇಳಿ, ಸೀರೆ ಕೊಳ್ಳುವ ನೆಪದಲ್ಲಿ ನಗರದ ಪ್ರತಿಷ್ಠಿತ ಸೀರೆ ಶೋರೂಂಗಳಿಗೆ ಹೋಗುತ್ತಿದ್ದರು. ಮೊದಲಿಗೆ ಮೂವರು ಮಹಿಳೆಯರು ಸೀರೆ ಶೋರೂಂ ಒಳಗೆ ಹೋಗುತ್ತಿದ್ದರು. ನಂತರ ಮೂವರು ಪುರುಷರು ಶೋರಂ ಒಳಗೆ ಎಂಟ್ರಿ ಕೊಡುತ್ತಿದ್ದರು. ಇವರು ಅಲ್ಲಿಯ ಸಿಬ್ಬಂದಿಗೆ ಅಧಿಕ ಬೆಲೆ ಬಾಳುವು ಸೀರೆ ತೋರಿಸಿ ಎಂದು ಹೇಳುತ್ತಿದ್ದರು. ಈ ಆರು ಜನರು ಒಟ್ಟಿಗೆ 50-60 ಸೀರೆಗಳನ್ನು ಒಮ್ಮೆಲೆ ತೆಗೆಸಿ ನೋಡಲು ಆರಂಭಿಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ 

ನಂತರ ಸೀರೆ ನೋಡುತ್ತಿರುವಾಗ ಮಾಲೀಕರು, ಸಿಬ್ಬಂದಿಯ ಗಮನ ಬೇರೆಡೆ ಸೆಳೆಯುತ್ತಿದ್ದರು. ಈ ವೇಳೆ ಒಂದು- ಒಂದೂವರೆ ಲಕ್ಷ ಬೆಲೆಬಾಳುವ ಸೀರೆಗಳನ್ನು ಕಳವು ಮಾಡುತ್ತಿದ್ದರು. ಹೀಗೆ ನಗರದ ವಿವಿಧ ಪೊಲೀಸ್​​ ಠಾಣಾ ವ್ಯಾಪ್ತಿಯ ಐದಕ್ಕೂ ಹೆಚ್ಚು ಶೋರೂಂಗಳಲ್ಲಿ ಸೀರೆಗಳನ್ನು ಕಳವು ಮಾಡಿದ್ದಾರೆ. ಇವರ ಖತರ್ನಾಕ್ ಕಳ್ಳತನದ ದೃಶ್ಯ ಶೋರೂಂಗಳ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 7:56 am, Wed, 23 August 23

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು