Bengaluru: RBI ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂ. ವಂಚನೆ: ಎಂಟು ಜನರ ಗ್ಯಾಂಗ್​ ಅರೆಸ್ಟ್​​ ಮಾಡಿದ ಸಿಸಿಬಿ

|

Updated on: Mar 23, 2023 | 2:57 PM

RBI ಹೆಸರಿನಲ್ಲಿ ಜನರನ್ನು ವಂಚನೆ ಮಾಡುತ್ತಿದ್ದ ಎಂಟು ಜನರ ಗ್ಯಾಂಗ್​ ಒಂದನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

Bengaluru: RBI ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂ. ವಂಚನೆ: ಎಂಟು ಜನರ ಗ್ಯಾಂಗ್​ ಅರೆಸ್ಟ್​​ ಮಾಡಿದ ಸಿಸಿಬಿ
ಪ್ರಾತಿನಿಧಿಕ ಚಿತ್ರ
Image Credit source: www.aarp.org
Follow us on

ಬೆಂಗಳೂರು: RBI ಹೆಸರಿನಲ್ಲಿ ಜನರನ್ನು ವಂಚನೆ (Fraud) ಮಾಡುತ್ತಿದ್ದ ಎಂಟು ಜನರ ಗ್ಯಾಂಗ್​ ಒಂದನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಅಶೋಕ್ ಕುಮಾರ್, ರಮೇಶ್ ಕುಮಾರ್, ಮಂಜುನಾಥ್, ರಾಜ್ ಕುಮಾರ್, ಗಂಗರಾಜು, ಕುಮಾರೇಶ್, ಮೂರ್ತಿ ನಾಯಕ್, ಸಿದ್ದರಾಜು ನಾಯಕ್ ಬಂಧಿತ ಆರೋಪಿಗಳು. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲು ಮಾಡಲಾಗಿದೆ. RBIನ ನಕಲಿ ದಾಖಲೆ ಸೃಷ್ಟಿ ಮಾಡಿಕೊಂಡು ಜನರಿಂದ ಸಾವಿರಾರು ಕೋಟಿ ರೂ. ವಂಚನೆ ಮಾಡಿದ್ದಾರೆ. ವಿದೇಶದಿಂದ 75 ಸಾವಿರ ಕೋಟಿ ರೂ. ಹಣ ಬಂದಿದೆ. ಅದನ್ನು ಡ್ರಾ ಮಾಡಿಕೊಳ್ಳಲು ಸುಮಾರು 150 ಕೋಟಿ ರೂ. ಹಣ ಬೇಕಾಗಿದೆ ಎಂದು ನಂಬಿಸಲಾಗಿದೆ. ಬಳಿಕ ಹಣ ವಂಚನೆ ಮಾಡಲು ಪ್ಲಾನ್ ರೂಪಿಸಿದ್ದಾರೆ. ಈ ಕಥೆ ಪ್ರಕಾರ ಬಾಂಬೆ ಮತ್ತು ದೆಹಲಿಯ ಆರ್​ಬಿಐ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ. ಆರ್​ಬಿಐನಲ್ಲಿ ಫೋಟೋ ತೆಗೆಸಿ ಹಣ ಅಕೌಂಟ್​ನಲ್ಲಿ ಇರುವ ರೀತಿ ಬಿಂಬಿಸಿದ್ದಾರೆ.

ನಕಲಿ ನೌಕರರನ್ನು ಸೃಷ್ಟಿ ಮಾಡಿದ್ದ ಗ್ಯಾಂಗ್​, ಆರ್​ಬಿಐ ಅಧಿಕಾರಿಗಳು ಹೇಳಿದ್ದಾರೆ ಎಂದು ಹಾಗೂ ಲ್ಯಾಪ್ ಟಾಪ್​ನಲ್ಲಿ ನಕಲಿ ಲೆಟರ್​ನ್ನು ತೋರಿಸಿದ್ದಾರೆ. ಹೀಗೆ ಹಲವಾರು ಜನರನ್ನು ಗ್ಯಾಂಗ್​ ವಂಚಿಸಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ

ಆರೋಪಿಯನ್ನೇ ಅಪಹರಿಸಿ 40 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು

ಪೊಲೀಸರೇ ಆರೋಪಿಯನ್ನು ಅಪಹರಿಸಿ ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಸಿನಿಮೀಯ ಪ್ರಕರಣವೊಂದು ಬೆಂಗಳೂರಿನ ಮಾರತ್ತ ಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಇದೀಗ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತನಿಖೆ ವೇಳೆ ಪೊಲೀಸರೇ ಅಪಹರಣ ಎಸಗಿರುವುದು ತಿಳಿದುಬಂದಿತ್ತು. ಇದರ ಬೆನ್ನಲ್ಲೇ ಎಲ್ಲರನ್ನೂ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದರು.

ಇದನ್ನೂ ಓದಿ: ಬಳ್ಳಾರಿ ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್​ ಪೊಲೀಸ್ ಪೇದೆ ಅನುಮಾನಾಸ್ಪದವಾಗಿ ಸಾವು

ನಡೆದಿದ್ದೇನು?

ಹುಲಿ ಚರ್ಮ, ಉಗುರು ಮಾರಾಟ ಮಾಡುತ್ತಿದ್ದ ಆರೋಪಿ ರಾಮಾಂಜನಿ ಎಂಬಾತನನ್ನು ಮಾರ್ಚ್ 18 ರ ಸಂಜೆ 4‌.30 ಕ್ಕೆ ಅಪಹರಣ ಮಾಡಲಾಗಿತ್ತು. ಈ ವಿಚಾರವಾಗಿ ರಾಮಾಂಜನಿಯ ಸಂಬಂಧಿ ಶಿವರಾಮಯ್ಯ ಎಂಬವರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಕೂಡಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದ ಬಾಗಲೂರು ಪೊಲೀಸರು ರಾಮಾಂಜನಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಪೊಲೀಸರೇ ಅಪಹರಣ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.

ಅಕ್ರಮ ಗಣಿಗಾರಿಕೆ: 5.21 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಗಣಿಗಾರಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ. ಬಿ.ಪಿ.ಆನಂದ್ ಕುಮಾರ್, ಪಾಂಡುರಂಗ ಸಿಂಗ್, ಗೋಪಾಲ್ ಸಿಂಗ್ ಪಾಲುದಾರಿಕೆಯ ಎಸ್​ಬಿ ಮಿನರಲ್ಸ್ ಒಡೆತನದ ದಿನೇಶ್ ಕುಮಾರ್ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷ್ಮಿ ಮತ್ತು ಜೆ.ಮಿಥಿಲೇಶ್ವರ್ ಗಣಿಗೆ ಸೇರಿದ 5.21 ಕೋಟಿ ಮೌಲ್ಯದ ಒಟ್ಟು ಆರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಎರಡು ಕಂಪನಿಗಳು ಕಬ್ಬಿಣದ ಅದಿರನ್ನು ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದವು. ಪ್ರಕರಣ ಸಂಬಂಧ ಎಸ್​ಬಿ ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್, ಸರ್ಕಾರಿ ನೌಕರರು ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಲೋಕಾಯುಕ್ತ ಎಸ್​ಐಟಿ ದೂರು ದಾಖಲಿಸಿತ್ತು. ದೂರಿನ ಅನ್ವಯ ಕಂಪನಿಗಳ ವಿರುದ್ಧ ಇಡಿ ಅಧಿಕಾರಿಗಳು ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:57 pm, Thu, 23 March 23