ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕಮಲಮ್ಮ ಎಂಬುವರಿಗೆ ಸೇರಿದ 4 ಎಕರೆ ಪ್ರದೇಶದಲ್ಲಿ ಇರೋ ತೋಟದ ಮನೆಗೆ 10ಕ್ಕೂ ಹೆಚ್ಚು ಜನರು ನುಗ್ಗಿ ಮನೆಗೆ ಬೆಂಕಿ ಹಚ್ಚಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಂ.ಕೆ.ದೊಡ್ಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Follow us on
ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಕಮಲಮ್ಮ ಎಂಬುವರಿಗೆ ಸೇರಿದ 4 ಎಕರೆ ಪ್ರದೇಶದಲ್ಲಿ ಇರೋ ತೋಟದ ಮನೆಗೆ 10ಕ್ಕೂ ಹೆಚ್ಚು ಜನರು ನುಗ್ಗಿ ಮನೆಗೆ ಬೆಂಕಿ ಹಚ್ಚಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಂ.ಕೆ.ದೊಡ್ಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.