ಆಸ್ತಿ ಕಲಹ: ಭಾವನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಸಾವು
ಬೆಂಗಳೂರು: ಆಸ್ತಿ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 45 ವರ್ಷದ ಸುಶೀಲ ಮೃತ ದುರ್ದೈವಿ. ಫೆಬ್ರವರಿ 2 ರಂದು ತಾವರೆಕೆರೆಯ ಹೊನ್ನಗಹಟ್ಟಿ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ ಭಾವ ಅನಂತ ಕುಮಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ಚಾಕುವಿನಿಂದ ದೇಹದ ಹಲವು ಭಾಗಗಳಿಗೆ ಇರಿದು ಆರೋಪಿ ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿದ್ದ ಸುಶೀಲರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಿಸದೆ ಸುಶೀಲ […]
ಬೆಂಗಳೂರು: ಆಸ್ತಿ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 45 ವರ್ಷದ ಸುಶೀಲ ಮೃತ ದುರ್ದೈವಿ.
ಫೆಬ್ರವರಿ 2 ರಂದು ತಾವರೆಕೆರೆಯ ಹೊನ್ನಗಹಟ್ಟಿ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ ಭಾವ ಅನಂತ ಕುಮಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ಚಾಕುವಿನಿಂದ ದೇಹದ ಹಲವು ಭಾಗಗಳಿಗೆ ಇರಿದು ಆರೋಪಿ ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿದ್ದ ಸುಶೀಲರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಿಸದೆ ಸುಶೀಲ ಸಾವಿಗೀಡಾಗಿದ್ದಾರೆ.
2008ರಲ್ಲಿ ಸುಶೀಲ ಪತಿ ಗಂಗರಾಜು ಅಪಘಾತದಲ್ಲಿ ಮೃತಪಟ್ಟಿದ್ದರು. ಹಾಗಾಗಿ ಮಗಳೊಂದಿಗೆ ಹೊನಗಹಟ್ಟಿ ಗ್ರಾಮದಲ್ಲಿ ಸುಶೀಲ ವಾಸವಿದ್ದರು. ತಾವರೆಕೆರೆ ಬಳಿ ಇರುವ 15 ಕೋಟಿ ರೂ. ಮೌಲ್ಯದ ಆಸ್ತಿ ವಿಷಯವಾಗಿ ಇಬ್ಬರ ನಡುವೆ ವೈಮನಸ್ಸಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಭಾವ ಅನಂತಕುಮಾರ್, ಸುಶೀಲ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾಗಿ ಆರೋಪ ಮಾಡಲಾಗಿದೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.