ಕೇರಳದಿಂದ ಕಾನೂನು ವಿದ್ಯಾಭ್ಯಾಸಕ್ಕೆಂದು ಉಡುಪಿಗೆ ಬಂದವರು ಈಗ ಡ್ರಗ್ಸ್ ಡೀಲರ್ಸ್ !
ಕೇರಳದಿಂದ ಬಂದು ಉಡುಪಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಉಡುಪಿಯ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ: ಕೇರಳದಿಂದ (Kerala) ಬಂದು ಉಡುಪಿಯಲ್ಲಿ (Udupi) ಡ್ರಗ್ಸ್ (Drugs) ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು (Law Students) ಮಣಿಪಾಲ (Manipal) ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಭೀಷ್(23), ಅಮಲ್(22) ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಗಳು. ಮಾದಕ ಮತ್ತಿನಲ್ಲಿ ಮೈ ಮರೆಯುವರ ಸಂಖ್ಯೆ ಇತ್ತೀಚಿಗೆ ಉಡುಪಿಯ, ಮಣಿಪಾಲದ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿದೆ.
ಕೇರಳದ ಮೂಲದವರಾದ ಇವರು ಕಾನೂನು ವಿದ್ಯಾಭ್ಯಾಸಕ್ಕೆಂದು ಉಡುಪಿಯ ಪ್ರತಿಷ್ಠಿತ ವೈಕುಂಠ ಬಾಳಿಗ ಕಾನೂನು ಕಾಲೇಜಿಗೆ ದಾಖಲಾಗುತ್ತಾರೆ. ಇಲ್ಲಿ ಇವರು ತಮ್ಮದೆಯಾದ ಒಂದು ಗ್ಯಾಂಗ್ ಕಟ್ಟಿಕೊಳ್ಳುತ್ತಾರೆ. ನಂತರ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಕೇರಳದಿಂದ ಡ್ರಗ್ಸ್ ತಂದು ಉಡುಪಿ, ಮಣಿಪಾಲದ ವಿದ್ಯಾರ್ಥಿಗಳಿಗೆ ಅಪಾರ್ಟ್ಮೆಂಟ್ವೊಂದರಲ್ಲಿ ಕೂತು ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿ: ಬಸ್ ಹತ್ತುವ ವೇಳೆ ಮಾಂಗಲ್ಯ ಚೈನ್ ಕದ್ದು ಸಿಕ್ಕಿಬಿದ್ದ ಕಳ್ಳಿ
ಇದರ ಬಗ್ಗೆ ಮಾಹಿತಿ ಪಡೆದ ಮಣಿಪಾಲ ಪೊಲೀಸರು ದಾಳಿ ಮಾಡಿ ಈ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಇನ್ನು ಗ್ಯಾಂಗ್ನಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರಿಂದ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ (MDMA) ಮಾದಕ ದ್ರವ್ಯ, 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಮಾರಲು ಯತ್ನಿಸುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಬಂಧನ
ಶಿವಮೊಗ್ಗ: ಶಿವಮೊಗ್ಗ ನಗರದ ಹಳೆ ಗುರುಪುರ ಬಡಾವಣೆ ಮನೆಯೊಂದರ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದು, ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಸಿದ್ದಾರೆ. ಬಿಜಾಪುರ ಮೂಲದ ಅಬ್ದುಲ್ ಖಯ್ಯಂ (25) ಬಳ್ಳಾರಿ ಮೂಲದ ಅರ್ಪಿತಾ (23) ಬಂಧಿತ ಆರೋಪಿಗಳು.
ಆರೋಪಿಗಳು ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಗಾಂಜಾದ ಪ್ಯಾಕೇಟ್ ಮಾಡಿ, ಮಾರಾಟಕ್ಕೆ ಯತ್ನಿಸುತ್ತಿದ್ದರು. ಬಂಧಿತರಿಂದ 20 ಸಾವಿರ ರೂ. ಮೌಲ್ಯದ ಒಣ ಗಾಂಜಾ, ಟೋಕ್ರಮ್ ಆಗ್ರೋ, ಟೋಕ್ರಮ್ ಮೈಕ್ರೋ, ಟೋಕ್ರಮ್ ಕಾಲ್ ಮಾರ್ಗ್ ಎಂಬ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ