ಕಲಬುರಗಿ ವಕೀಲನ ಹತ್ಯೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು

| Updated By: ರಮೇಶ್ ಬಿ. ಜವಳಗೇರಾ

Updated on: Dec 08, 2023 | 12:30 PM

Kalaburagi Lawyer Murder Case : ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಹತ್ಯೆ ಮಾಡಿದ್ದು, ಇನ್ನು ಈ ಪ್ರಕರಣ ದಾಖಲಾದ 24 ಗಂಟೆಗಳಲ್ಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ವಕೀಲನ ಹತ್ಯೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು
ಕೊಲೆಯಾದ ವಕೀಲ ಈರಣ್ಣ ಗೌಡ
Follow us on

ಕಲಬುರಗಿ, (ಡಿಸೆಂಬರ್ 08): ಕಲಬುರಗಿಯಲ್ಲಿ (Kalaburagi) ವಕೀಲ (Lawyer) ಈರಣ್ಣ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ವಕೀಲ ಈರಣ್ಣ ಗೌಡ ಹತ್ಯೆಯಾದ 24 ಗಂಟೆಯೊಳಗೆ ಹಂತಕರನ್ನು ಕಲಬುರಗಿ ವಿಶ್ವವಿದ್ಯಾಲಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವ್ವಣ್ಣಾ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ‌, ಭಾಗೇಶ್ ಬಂಧಿತ ಆರೋಪಿಗಳು. ಮತ್ತೊಬ್ಬ ಪ್ರಮುಖ ಆರೋಪಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

ಬಂಧಿತ ಆರೋಪಿಗಳು ಕಲಬುರಗಿ ಲಾಡ್ಜ್ ನಲ್ಲಿ ಉಳಿದುಕೊಂಡು ನಾಲ್ಕು ದಿನದಿಂದ ಈರಣ್ಣಗೌಡ ಕೊಲೆಗೆ ಹೊಂಚು ಹಾಕಿದ್ದರು. ಸಾಕಷ್ಟು ಬಾರಿ ಕೋರ್ಟ್ ಹಾಗೂ ಮನೆ ಬಳಿ ಹೋಗಿ ಹತ್ಯೆಗೆ ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದ್ದು, ಹತ್ಯೆಗೆ ಕಾರಣವೇನು ಎನ್ನುವುದನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ವಕೀಲನ ಬರ್ಬರ ಹತ್ಯೆ

ನಿನ್ನೆ(ಡಿಸೆಂಬರ್ 07) ಈರಣ್ಣಗೌಡ ಕೋರ್ಟ್​ಗೆ ಹೋಗುವ ಸಂದರ್ಭದಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಂದಿದ್ದರು. ಕಲಬುರಗಿ ನಗರದ ಸಾಯಿ ಮಂದಿರ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಹಾಡುಗಲೇ ವಕೀಲ ಈರಣ್ಣಗೌಡನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡಿದ್ದರು. ಈರಣ್ಣ ಲೈಸೆನ್ಸ್ ಗನ್​ ಹೊಂದಿದ್ದು, ಅದನ್ನು ತೆಗೆಯಬೇಕು ಎನ್ನುವಷ್ಟರಲ್ಲೇ ಕೊಚ್ಚಿ ಕೊಂದಿದ್ದರು. ಇನ್ನು ಈರಣ್ಣ ಗನ್ ತೆಗೆಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಇನ್ನು ಈ ಸಂಬಂಧ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್(FIR) ದಾಖಲಾಗಿತ್ತು. ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.

Published On - 12:21 pm, Fri, 8 December 23