AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನ ಬರ್ಬರ ಹತ್ಯೆ: ದುಷ್ಕರ್ಮಿಗಳಿಂದ ಕೃತ್ಯ

ಕಲುಷಿತ ನೀರು ಸೇವಿಸಿ 78 ಜನರು ಅಸ್ವಸ್ಥರಾದಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಜನರನ್ನು ಚಿತ್ತಾಪುರ ತಾಲೂಕು ಆಸ್ಪತ್ರೆ, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Crime News: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನ ಬರ್ಬರ ಹತ್ಯೆ: ದುಷ್ಕರ್ಮಿಗಳಿಂದ ಕೃತ್ಯ
PU ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಳಾಪುರ(59) ಹತ್ಯೆಯಾದ ವ್ಯಕ್ತಿ.
TV9 Web
| Edited By: |

Updated on:May 13, 2022 | 9:37 AM

Share

ರಾಯಚೂರು: ಎಕ್ಸಾಂ ಡ್ಯೂಟಿ ಮುಗಿಸಿಕೊಂಡು ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ಬಳಿ ನಡೆದಿದೆ. PU ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಳಾಪುರ(59) ಹತ್ಯೆಯಾದ ವ್ಯಕ್ತಿ. ಮಾನಪ್ಪ, ದೇವದುರ್ಗದ ಬಾಲಕಿಯರ ಕಾಲೇಜು ಉಪನ್ಯಾಸಕರಾಗಿದ್ದು, ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಐಯಾಳಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ಅಡ್ಡಗಟ್ಟಿ ಹಲ್ಲೆ ನಡೆಸಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆ

ತುಮಕೂರು: ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಬಳಿ ನಡೆದಿದೆ. ವಯೋಸಹಜದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ದಾಖಲಾಗಿದೆ.

ಕಲುಷಿತ ನೀರು ಸೇವಿಸಿ 78 ಜನ ಅಸ್ವಸ್ಥ

ಕಲಬುರಗಿ: ಕಲುಷಿತ ನೀರು ಸೇವಿಸಿ 78 ಜನರು ಅಸ್ವಸ್ಥರಾದಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಜನರನ್ನು ಚಿತ್ತಾಪುರ ತಾಲೂಕು ಆಸ್ಪತ್ರೆ, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮದ ಬಹುತೇಕ ಭಾವಿಗಳು, ನದಿ ನೀರು ಕಲುಷಿತವಾಗಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಗ್ರಾಮದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಶುದ್ದ ಕುಡಿಯುವ ನೀರು ಪೂರೈಕೆಗಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶ್ರೀಸಿದ್ದರಾಮೇಶ್ವರ ದೇವಾಲಯದ ಬಸವ ಸಾವು

ಮಂಡ್ಯ: ಮೇವು ಸೇವಿಸುವಾಗ ವಿದ್ಯುತ್ ಸ್ಪರ್ಶಿಸಿ ಶ್ರೀಸಿದ್ದರಾಮೇಶ್ವರ ದೇವಾಲಯದ ಬಸವ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ನುಗ್ಗೆಹಳ್ಳಿಯಲ್ಲಿ ನಡೆದಿದೆ. ಬಸವನನ್ನ ಭಕ್ತಿಯಿಂದ ಪೂಜಿಸುತ್ತಿದ್ದ ನುಗ್ಗೆಹಳ್ಳಿ ಜನತೆ, ಪ್ರತಿ ನಿತ್ಯ ಮೇವು ಹಾಕಿ ಗ್ರಾಮಸ್ಥರು ಸಾಕಿದ್ದರು. ಕೆ.ಇ.ಬಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಕೆ.ಇ.ಬಿ ಅಧಿಕಾರಿಗಳ ನಿರ್ಲಕ್ಷವೇ ಬಸವನ ಸಾವಿಗೆ ಕಾರಣವೆಂದು ಆರೋಪ ಮಾಡಿದ್ದಾರೆ.

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

ಮಡಿಕೇರಿ: ಬೈಕ್​ಗಳ‌ ಮುಖಾಮುಖಿ ಡಿಕ್ಕಿಯಲ್ಲಿ ಯೋಧ ಸೇರಿ ಮೂವರಿಗೆ ತೀವ್ರ ಗಾಯವಾಗಿರುವಂತಹ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಗರೂರು ಗ್ರಾಮದಲ್ಲಿ ನಡೆದಿದೆ. ಸಿಆರ್ಪಿಎಫ್ ಯೋಧ ಡಾಲು(35) ತಲೆಗೆ ತೀವ್ರ ಪೆಟ್ಟಾಗಿದ್ದು, ಆಸೀಫ್, ಮನೋಜ್ ಎಂಬುವರಿಗೂ ಗಂಭೀರ ಗಾಯವಾಗಿದೆ. ಯೋಧ ಚಿಂತಾಜನಕ ಸ್ಥಿತಿಯಲ್ಲಿ ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸೋಮವಾರಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶೀಲ ಶಂಕಿಸಿ ಪತಿಯಿಂದ ಪತ್ನಿ ಕೊಲೆ

ನೆಲಮಂಗಲ: ಶೀಲ ಶಂಕಿಸಿ ಚಾಕು ಇರಿದು ಪತಿಯಿಂದ ಪತ್ನಿ ಕೊಲೆಯಾದಂತಹ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ಪುಷ್ಪಲತಾ (35) ಮೃತ ದುರ್ದೈವಿ. ಪತಿ ಸುನೀಲ್ ಎಂಬಾತನಿಂದ ಕೃತ್ಯವೆಸಗಲಾಗಿದೆ. ಆರೋಪಿ ಪತಿ ಪೊಲೀಸರು ವಶಕ್ಕೆ ಪಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:16 am, Fri, 13 May 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ