ಯೂಟರ್ನ್ ತೆಗೆದುಕೊಳ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ, ಲಾರಿ ಹಳ್ಳಕ್ಕೆ ಪಲ್ಟಿ
ಬೆಂಗಳೂರು ಗ್ರಾಮಾಂತರ: ಯೂಟರ್ನ್ ತೆಗೆದುಕೊಳ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಳ್ಳಕ್ಕೆ ಪಲ್ಟಿಯಾದ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ 6ರಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರ ಸೇರಿದಂತೆ ಸ್ಥಳೀಯರು ಲಾರಿ ಚಾಲಕನಿಗೆ ಥಳಿಸಿದ್ದಾರೆ. ಲಾರಿ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಆರೋಪಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಯೂಟರ್ನ್ ತೆಗೆದುಕೊಳ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಳ್ಳಕ್ಕೆ ಪಲ್ಟಿಯಾದ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ 6ರಲ್ಲಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರ ಸೇರಿದಂತೆ ಸ್ಥಳೀಯರು ಲಾರಿ ಚಾಲಕನಿಗೆ ಥಳಿಸಿದ್ದಾರೆ. ಲಾರಿ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಆರೋಪಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.