Crime News: ಶಿವಮೊಗ್ಗ ಸಮೀಪ ಲಾರಿ-ಕಾರು ಮುಖಾಮುಖಿಯಲ್ಲಿ ಮೂವರ ಸಾವು, ಬೆಂಗಳೂರು ಕ್ಯಾಸಿನೊ ಮೇಲೆ ಪೊಲೀಸರ ದಾಳಿ

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಸಂಭವಿಸಿದೆ.

Crime News: ಶಿವಮೊಗ್ಗ ಸಮೀಪ ಲಾರಿ-ಕಾರು ಮುಖಾಮುಖಿಯಲ್ಲಿ ಮೂವರ ಸಾವು, ಬೆಂಗಳೂರು ಕ್ಯಾಸಿನೊ ಮೇಲೆ ಪೊಲೀಸರ ದಾಳಿ
ಶಿವಮೊಗ್ಗ ಸಮೀಪ ರಸ್ತೆ ಅಪಘಾತ ಸಂಭವಿಸಿದೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 11, 2022 | 8:50 AM

ಶಿವಮೊಗ್ಗ: ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಸಂಭವಿಸಿದೆ. ವಿವೇಕ (21), ಕಾರ್ತಿಕ್ ​(21), ಮೋಹನ್ ​(21) ಮೃತರು. ಮೃತ ಯುವಕರು ದಾವಣಗೆರೆ ಮೂಲದ ನಿವಾಸಿಗಳು. ಇದೇ ಕಾರಿನಲ್ಲಿದ್ದ ರುದ್ರೇಶ್ ಎಂಬಾತನಿಗೆ ಗಾಯಗಳಾಗಿದ್ದು, ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. KA17 MA3581 ನೋಂದಣಿ ಸಂಖ್ಯೆಯ ಬ್ಯಾಲನೋ ಕಾರು KA27 C3924 ನೋಂದಣಿ ಸಂಖ್ಯೆಯ ಲಾರಿಗೆ ಮುಖಾಮುಖಿಯಾಯಿತು. ಕಾರು ಶಿವಮೊಗ್ಗದಿಂದ ಸವಳಂಗ ಕಡೆಗೆ ಹೋಗುತ್ತಿದ್ದರೆ, ಲಾರಿಯು ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಮಾಲೀಕರನ್ನು ಸಂಪರ್ಕಿಸಿದ್ದಾರೆ.

ಕಲಬುರ್ಗಿ: ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲ್ಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ. ಫೈನಾನ್ಸ್​ ಲೋನ್​ ರಿಕವರಿ ಏಜೆಂಟ್ ಸಚಿನ್ ಅಂಬಲಗಿ (25) ಕೊಲೆಯಾದ ಯುವಕ. ಶನಿವಾರ (ಡಿ 10) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನು ಕೊಲೆ ಮಾಡಲಾಗಿದೆ. ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಯಾಬಿನ್ ಬಣವೆಗೆ ಬೆಂಕಿ

ಆಳಂದ ತಾಲ್ಲೂಕಿನ ಸಾಲೆಗಾಂವ ಗ್ರಾಮದಲ್ಲಿ ಸೋಯಾಬಿನ್​ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ರೈತ ಮಹಿಳೆ ಜಯಶ್ರೀ ಕುಪನೂರೆ ಎಂಬುವರಿಗೆ ಸೇರಿದ ಅಪಾರ ಮೌಲ್ಯದ ಸೋಯಾಬಿನ್ ಬಣವೆ ಬೆಂಕಿಗಾಹುತಿಯಾಗಿದೆ. ಸಾವಿರಾರು ರೂಪಾಯಿ ನಷ್ಟವಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಕುಟುಂಬ ಕಂಗಾಲಾಗಿದೆ.

ಇಂದಿರಾನಗರ ಕ್ಯಾಸಿನೊ ಮೇಲೆ ಸಿಸಿಬಿ ದಾಳಿ

ಇಂದಿರಾನಗರದಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿರುವ ಕ್ಯಾಸಿನೊ ಮೇಲೆ‌ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೂ ನಿರ್ಮಾಣ ಹಂತದಲ್ಲಿರುವ ಕ್ಯಾಸಿನೊ ಅದಾಗಲೇ ಜೂಜುಕೋರರ ಅಡ್ಡೆಯಾಗಿತ್ತು. ಗೋಲ್ಡನ್ ಚಿಪ್ಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಹೆಸರಲ್ಲಿ ಪರವಾನಗಿ ಪಡೆದು ಅಕ್ರಮವಾಗಿ ಕ್ಯಾಸಿನೊ ನಡೆಸಲಾಗುತ್ತಿತ್ತು. ಪ್ರತಿ ಟೇಬಲ್ ಮೇಲೆಯೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, 20ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗುತ್ತಿದೆ.

ಜಗಳೂರು: ಬಕೆಟ್​ಗೆ ಬಿದ್ದು 10 ತಿಂಗಳ ಮಗು ಸಾವು

ದಾವಣಗೆರೆ: ನೀರು ತುಂಬಿದ್ದ ಬಕೆಟ್​ಗೆ ಬಿದ್ದು 10 ತಿಂಗಳ ಮಗು ಮೃತಪಟ್ಟಿರುವ ಘಟನೆ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್​​, ತಾರಾ ದಂಪತಿ ಪುತ್ರಿ ಅನುಶ್ರಾವ್ಯ ಮೃತ ಬಾಲಕಿ. ಮನೆ ಬಳಿ ಆಟವಾಡುತ್ತಿದ್ದಾಗ ಮಗು ಬಕೆಟ್​ಗೆ ಮುಗುಚಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ಮತ್ತಷ್ಟು ಕ್ರೈಮ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Sun, 11 December 22

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು