ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ […]

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು
ಸಾಧು ಶ್ರೀನಾಥ್​

Updated on: Dec 19, 2019 | 10:33 AM

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ.
ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಇನ್ನು ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us