AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು

ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶಕ್ಕೆ ಬಂದಿದ್ದ ಮೇಕಪ್ ಆರ್ಟಿಸ್ಟ್ ದುರಂತ ಅಂತ್ಯಕಂಡಿದ್ದಾಳೆ.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು
ದೇವಿಕಾ, ಕೊಲೆಯಾದ ಮೇಕಪ್​ ಆರ್ಟಿಸ್ಟ್​
Follow us
ರಮೇಶ್ ಬಿ. ಜವಳಗೇರಾ
|

Updated on: May 19, 2023 | 7:56 AM

ಕೊಚ್ಚಿ: ಮೇಕಪ್​ ಆರ್ಟಿಸ್ಟ್​ ಒಬ್ಬಳು ಪ್ರಿಯಕರನಿಂದಲೇ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್​ನಲ್ಲಿರುವ ಲಾಡ್ಜ್​ ಒಂದರಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಉದ್ಮಾ ಪಂಚಾಯಿತಿಯ ಮುಕ್ಕುನೋಥ್​ ನಿವಾಸಿ ಪಿ.ಬಿ. ದೇವಿಕಾ (34) ಎಂದು ಗುರುತಿಸಲಾಗಿದೆ. ಇನ್ನು ಹತ್ಯೆ ಮಾಡಿದ ಬಳಿಕ ಪ್ರಿಯಕರ ಸತೀಶ್​ (36) ಲಾಡ್ಜ್​ ರೂಮ್​ ಅನ್ನು ಲಾಕ್​ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾಡ್ಜ್​ ರೂಮ್​ ಅನ್ನು ತೆರೆದಾಗ ದೇವಿಕಾ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಬಾಲಕೃಷ್ಣನ್​ ನಾಯರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ

ಆರೋಪಿ ಸತೀಶ್ ಮುಲ್ಲಿಯಾರ್​ ಗ್ರಾಮ ಪಂಚಾಯಿತಿಯ​ ಬೊವಿಕನಮ್​ ಮೂಲದ ನಿವಾಸಿ. ಈತ ಕನ್ಹಂಗಾಡ್​ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಗೆ ಡಿವೋರ್ಸ್​ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿದೆ ಎಂದು ಸತೀಶ್​ ಪೊಲೀಸರ ಮುಂದೆ ಒಪ್ಪಿಕೊಮಡಿದ್ದಾನೆ ಎಂದು ತಿಳಿದುಬಂದಿದ್ದು, ಈ ಬಗ್ಗೆಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಮಾವೇಶಕ್ಕೆ ಬಂದಿದ್ದ ದೇವಿಕಾ

ಕಳೆದ ಎರಡು ತಿಂಗಳಿನಿಂದ ಸತೀಶ್​ ಲಾಡ್ಜ್​ನಲ್ಲಿ ವಾಸವಿದ್ದನು. ಕನ್ಹಂಗಾಡ್​ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್​ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್​ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್​ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್​ಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ