ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು

ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ.

ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು
ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರನ ವಿರುದ್ಧ ದೂರು ನೀಡಿದ ಯುವತಿ
Edited By:

Updated on: Dec 19, 2023 | 7:16 AM

ಬೆಂಗಳೂರು, ಡಿ.19: ನಗರದ (Bengaluru) ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಹೆಣ್ಣು ಭ್ರೂಣ ಹತ್ಯೆ (Feticide) ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ.

ಫೇಸ್​ಬುಕ್ ಮೂಲಕ ಹಾಸನ ಜಿಲ್ಲಾ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಯುವತಿ ದೂರು ನೀಡಿದ್ದಾಳೆ.

ಇದನ್ನೂ ಓದಿ: ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಆರೋಗ್ಯ ಇಲಾಖೆ

ಬಾಲಕೃಷ್ಣ ಸುನೀಲ್ ಎಂಬಾತ ತನ್ನನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸಿ ಅವನ ಕಾಮದ ಆಸೆಗಾಗಿ ನನ್ನನ್ನು ತಾಯಿಯನ್ನಾಗಿ ಮಾಡಿ ಭ್ರೂಣ ಹತ್ಯೆಯನ್ನೂ ಮಾಡಿಸಿದ್ದಾಣೆ. ಇದರ ಜೊತೆಗೆ ತನ್ನಲ್ಲಿದ್ದ ಹಣವನ್ನೂ ದೋಚಿದ್ದಾನೆ. ಬೆಂಗಳೂರಿನಲ್ಲಿ ಗಂಡ ಹೆಂಡತಿಯರಂತೆ ಒಟ್ಟಿಗೆ ಇದ್ದೆವು. ಇದೀಗ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಂಡು ಹಾಸನದ ಸಕಲೇಶಪುರದ ಅಗಲಟ್ಟಿ ಎಂಬ ಊರಿನಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದು, ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ