ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕನನ್ನು ಮಧುಗಿರಿ ಬಿಇಒ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ ನೀಡುತ್ತಿದ್ದ(sexually harassment) ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ (Teacher) ಮಂಜುನಾಥನನ್ನು ಅಮಾನತು ಮಾಡಲಾಗಿದೆ. ಇನ್ನು ಕರ್ತವ್ಯಲೋಪ ಆರೋಪದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಸಹ ಸಸ್ಪೆಂಡ್ ಮಾಡಿ ಮಧುಗಿರಿ ಬಿಇಒ ತಿಮ್ಮರಾಜು ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊದ್ದೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಮಂಜುನಾಥ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಶಾಲೆಗೆ ನುಗ್ಗಿ ಮಂಜುನಾಥನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.
ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು
ಮಂಜುನಾಥನ ಕಾಮಚೇಷ್ಟೆ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಹಾಗೂ ಬುಡವನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದರು. ಇದೀಗ ಬಿಇಒ, ಶಿಕ್ಷಕ ಮಂಜುನಾಥನನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಲೋಪ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಸಹ ಸಸ್ಪೆಂಡ್ ಮಾಡಿದ್ದಾರೆ. ಸದ್ಯ ಶಿಕ್ಷಕ ಮಂಜುನಾಥ ಬಡವನಹಳ್ಳಿ ಪೊಲೀಸರ ವಶದಲ್ಲಿದ್ದಾರೆ.
ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:04 am, Tue, 28 March 23