ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸೇತುವೆಯಿಂದ ಕೆಳಗೆಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ಬಾಬಿ ರಾವತ್ (19) ಮತ್ತು ಸತೇಂದ್ರ ಕುಶ್ವಾಹ (28) ಎಂದು ಗುರುತಿಸಲಾಗಿದೆ, ಅವರು ಬಾಲಕಿಯನ್ನು ಅಪಹರಿಸಿ ದಾಬ್ರಾದ ಸಹರಾಯ್ ಸೇತುವೆಯ ಬಳಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದಲ್ಲಿ ಇಬ್ಬರು ವ್ಯಕ್ತಿಗಳು 16 ವರ್ಷದ ಬಾಲಕಿಯನ್ನು ಅಪಹರಿಸಿ, ಅಮಾನುಷವಾಗಿ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸೆದಿದ್ದಾರೆ ಮತ್ತು ಸೇತುವೆಯಿಂದ ಎಸೆದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ಪೊಲೀಸರ ಪ್ರಕಾರ, ಸೋಮವಾರ ಮಧ್ಯಾಹ್ನ 10 ನೇ ತರಗತಿಯ ವಿದ್ಯಾರ್ಥಿನಿ ಕೋಚಿಂಗ್ ತರಗತಿಗಳಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯನ್ನು ಅಪಹರಿಸಿ ದಾಬ್ರಾದ ಸಹರಾಯ್ ಸೇತುವೆಯ ಬಳಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಆಕೆಯ ಮೇಲೆ ಅತ್ಯಾಚಾರವೆಸಗಿ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಸಹರಾಯ್ ಸೇತುವೆಯಿಂದ ತಳ್ಳಿದ್ದಾರೆ. ಸ್ಥಳೀಯ ನಿವಾಸಿಗಳು ಆಕೆಯು ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ಕಂಡು ತಕ್ಷಣ ಆಸ್ಪತ್ರೆಗೆ ಸೇರಿಸಿ ಕುಟುಂಬದವರಿಗೆ ವಿಷಯ ತಲುಪಿಸಿದ್ದಾರೆ.
ಪಕ್ಕೆಲುಬುಗಳು ಮುರಿದಿವೆ, ಖಾಸಗಿ ಭಾಗಗಳಲ್ಲೂ ಗಾಯಗಳಾಗಿವೆ. ಆಕೆಯ ಪರಿಸ್ಥಿತಿ ಸ್ಥಿರವಾಗಿದೆ ಎಂಬುದು ತಿಳಿದುಬಂದಿದೆ.
ಪ್ರಜ್ಞೆ ಬಂದ ನಂತರ ಆಕೆಯ ಬಳಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಆಕೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಇಬ್ಬರು ಹಿಂಬಾಲಿಸಿ ಆಕೆಯನ್ನು ಅಪಹರಿಸಿದ್ದರು. ಸೆಕ್ಷನ್ 376(ಡಿ), 366 (ಅಪಹರಣ) ಮತ್ತು 323 ಅಡಿ ಪ್ರಕರಣ ದಾಖಲಿಸಲಾಗಿದೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮತ್ತಷ್ಟು ಓದಿ: ಮಧ್ಯಪ್ರದೇಶ: ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಪೋಷಕರ ಹಣೆಗೆ ಗನ್ ಇಟ್ಟು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಭನ್ವಾರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಆದರೆ ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತ್ತೊಂದು ಘಟನೆ
ಹಣೆಗೆ ಬಂದೂಕಿಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಹಣೆಗೆ ಬಂದೂಕಿಟ್ಟು ಅತ್ಯಾಚಾರ ಮಾಡಿರುವ ಘಟನೆ ಸಹರಾನ್ಪುರದಲ್ಲಿ ನಡೆದಿತ್ತು. ಮದುವೆಯ ನೆಪದಲ್ಲಿ ಕರೆದೊಯ್ದು ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಮತ್ತು ಅವರ ಸಹೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ತನ್ನನ್ನು ಬೇರೆ ಬೇರೆ ಹೋಟೆಲ್‌ಗಳಿಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ ನಂತರ ಗರ್ಭಿಣಿಯಾಗಿದ್ದಳು ಎಂದು ಅವರು ಆರೋಪಿಸಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ