AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮದುವೆ ಮನೆಯಲ್ಲಿ ವಿಷ ಸೇವಿಸಿದ ನವ ಜೋಡಿ, ವರ ಸಾವು, ವಧುವಿನ ಸ್ಥಿತಿ ಗಂಭೀರ

ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

Madhya Pradesh: ಮದುವೆ ಮನೆಯಲ್ಲಿ ವಿಷ ಸೇವಿಸಿದ ನವ ಜೋಡಿ, ವರ ಸಾವು, ವಧುವಿನ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: May 18, 2023 | 9:16 AM

ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ವರ ಸಾವನ್ನಪ್ಪಿದ್ದು, ವಧುವಿನ ಪರಿಸ್ಥಿತಿ ಚಿಂತಾಜನಕವಾಗಿದೆ. ವಿವಾಹದ ಸಂದರ್ಭದಲ್ಲಿ ವಾಗ್ವಾದ ನಡೆದಿತ್ತು.  ನಂತರ ಇಬ್ಬರೂ ವಿಷ ಸೇವಿಸಿದ್ದರು, ಬಳಿಕ 21 ವರ್ಷದ ವರ ವಿಷ ಸೇವಿಸಿ ಮೃತಪಟ್ಟಿದ್ದಾರೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ವಧು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಜಗಳ ನಡೆದ ಕಾರಣ ವರ ವಿಷ ಸೇವಿಸಿ ತನ್ನ 20 ವರ್ಷದ ವಧುವಿಗೆ ಈ ವಿಷಯವನ್ನು ತಿಳಿಸಿದ್ದಾನೆ.

ಮತ್ತಷ್ಟು ಓದಿ: Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ವರ ವಿಷ ಸೇವಿಸಿರುವುದು ಗೊತ್ತಾದ ತಕ್ಷಣ ವಧು ಕೂಡ ವಿಷ ಕುಡಿದಿದ್ದಾಳೆ. ವರದ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಯುವತಿಯು ಮದುವೆಯಾಗುವಂತೆ ಆತನ ಮೇಲೆ ಒತ್ತಡ ಹೇರುತ್ತಿದ್ದಳು, ವೃತ್ತಿಜೀವನದ ಆಧಾರದ ಮೇಲೆ ಎರಡು ವರ್ಷಗಳ ಕಾಲಾವಕಾಶ ಕೋರಿದಾಗ ಮಹಿಳೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು ಎಂದಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ