ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ವರ ಸಾವನ್ನಪ್ಪಿದ್ದು, ವಧುವಿನ ಪರಿಸ್ಥಿತಿ ಚಿಂತಾಜನಕವಾಗಿದೆ. ವಿವಾಹದ ಸಂದರ್ಭದಲ್ಲಿ ವಾಗ್ವಾದ ನಡೆದಿತ್ತು. ನಂತರ ಇಬ್ಬರೂ ವಿಷ ಸೇವಿಸಿದ್ದರು, ಬಳಿಕ 21 ವರ್ಷದ ವರ ವಿಷ ಸೇವಿಸಿ ಮೃತಪಟ್ಟಿದ್ದಾರೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ವಧು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಜಗಳ ನಡೆದ ಕಾರಣ ವರ ವಿಷ ಸೇವಿಸಿ ತನ್ನ 20 ವರ್ಷದ ವಧುವಿಗೆ ಈ ವಿಷಯವನ್ನು ತಿಳಿಸಿದ್ದಾನೆ.
ಮತ್ತಷ್ಟು ಓದಿ: Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ
ವರ ವಿಷ ಸೇವಿಸಿರುವುದು ಗೊತ್ತಾದ ತಕ್ಷಣ ವಧು ಕೂಡ ವಿಷ ಕುಡಿದಿದ್ದಾಳೆ. ವರದ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಯುವತಿಯು ಮದುವೆಯಾಗುವಂತೆ ಆತನ ಮೇಲೆ ಒತ್ತಡ ಹೇರುತ್ತಿದ್ದಳು, ವೃತ್ತಿಜೀವನದ ಆಧಾರದ ಮೇಲೆ ಎರಡು ವರ್ಷಗಳ ಕಾಲಾವಕಾಶ ಕೋರಿದಾಗ ಮಹಿಳೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು ಎಂದಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ