ದಲಿತ ಯುವಕನನ್ನು ಹೊಡೆದು ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿ ದುಷ್ಕೃತ್ಯ ಮೆರೆದಿದ್ದಾರೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 2019 ರಲ್ಲಿ ಮೃತ ವ್ಯಕ್ತಿಯ ಸಹೋದರಿ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವ ವಿಚಾರದಲ್ಲಿ ದಲಿತ ವ್ಯಕ್ತಿ ಮತ್ತು ಆರೋಪಿಗಳ ನಡುವೆ ವಾದ ವಿವಾದ ನಡೆದ ನಂತರ ಗುರುವಾರ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
18 ವರ್ಷದ ನಿತಿನ್ ಅಹಿರ್ವಾರ್, ತನ್ನ ಸಹೋದರಿ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಥಳಿಸಿ ಹತ್ಯೆ ಮಾಡಿದ್ದಾರೆ, ದೂರು ಹಿಂಪಡೆಯುವಂತೆ ಆರೋಪಿ ಸಂತ್ರಸ್ತೆಯ ಸಹೋದರಿಯ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಆರೋಪಿ ವಿಕ್ರಮ್ ಸಿಂಗ್ ಠಾಕೂರ್ ಮೊದಲು ಸಂತ್ರಸ್ತೆಯ ಮನೆಯನ್ನು ಧ್ವಂಸ ಮಾಡಿ ನಂತರ ಕೊಲೆ ಹತ್ಯೆ ಮಾಡಿದ್ದಾನೆ. ಸಂತ್ರಸ್ತೆಯ ತಾಯಿ ಮಧ್ಯಪ್ರವೇಶಿಸಲು ಬಂದಾಗ, ಆಕೆಯನ್ನು ವಿವಸ್ತ್ರಗೊಳಿಸಲಾಗಿದೆ.
ಪ್ರಮುಖ ಆರೋಪಿ ಸೇರಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳು ವಿವಿಧೆಡೆ ಶೋಧ ನಡೆಸುತ್ತಿವೆ. 9 ಆರೋಪಿಗಳು ಮತ್ತು ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಕೋಮಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ.
ಮತ್ತಷ್ಟು ಓದಿ: Mysore News: ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆ
ಸಹೋದರಿಯ ನೀಡಿರುವ ಪ್ರಕಾರ, ಆರೋಪಿಗಳಾದ ಕೋಮಲ್ ಸಿಂಗ್, ವಿಕ್ರಮ್ ಸಿಂಗ್ ಮತ್ತು ಆಜಾದ್ ಸಿಂಗ್ ಅವರ ಮನೆಗೆ ಬಂದು ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವಂತೆ ಮನವೊಲಿಸಲು ಪ್ರಯತ್ನಿಸಿದರು. ಸಂತ್ರಸ್ತೆಯ ತಾಯಿ ನಿರಾಕರಿಸಿದಾಗ ಆಕೆಗೆ ಬೆದರಿಕೆ ಹಾಕಿ ಆಕೆಯ ಮನೆಯನ್ನು ಧ್ವಂಸಗೊಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ