AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಯ ಗುಪ್ತಾಂಗಕ್ಕೆ ಮೆಣಸಿನಪುಡಿ, ರಾಡ್​ ಹಾಕಿ ಚಿತ್ರಹಿಂಸೆ ಕೊಟ್ಟ ಅತ್ತೆ-ಮಾವ

ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜ್​ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ ಜತೆ ನೋಡಿದ್ದಾಗಿ ಹೇಳಿರುವ ಅತ್ತೆ ಮಾವ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಅತ್ತೆ-ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಆಕೆಯನ್ನು ಬೆತ್ತಲು ಮಾಡಿ ಆಕೆಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ್ದರು.

ಸೊಸೆಯ ಗುಪ್ತಾಂಗಕ್ಕೆ ಮೆಣಸಿನಪುಡಿ, ರಾಡ್​ ಹಾಕಿ ಚಿತ್ರಹಿಂಸೆ ಕೊಟ್ಟ ಅತ್ತೆ-ಮಾವ
ಸಾಂದರ್ಭಿಕ ಚಿತ್ರImage Credit source: Sangbad Pratidin
ನಯನಾ ರಾಜೀವ್
|

Updated on: Dec 21, 2024 | 11:53 AM

Share

ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜ್​ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ ಜತೆ ನೋಡಿದ್ದಾಗಿ ಹೇಳಿರುವ ಅತ್ತೆ ಮಾವ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ.

ಅತ್ತೆ-ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಆಕೆಯನ್ನು ಬೆತ್ತಲು ಮಾಡಿ ಆಕೆಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ್ದರು.

ಸಂತ್ರಸ್ತೆಯ ಖಾಸಗಿ ಭಾಗಗಳು, ತೊಡೆಗಳು ಮತ್ತು ದೇಹದ ಇತರ ಭಾಗಗಳಿಗೆ ಅತ್ತೆ ಕಾದ ಕಬ್ಬಿಣದ ರಾಡ್‌ನಿಂದ ಸುಟ್ಟು ಹಾಕಿದ್ದಾರೆ, ಮಾವ ಆಕೆಯ ಖಾಸಗಿ ಭಾಗಗಳಿಗೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ.ಡಿಸೆಂಬರ್ 13 ರಂದು ಈ ಘಟನೆ ನಡೆದಿದೆ. ಪತಿ ಮತ್ತು ಮಾವ ಸಂತ್ರಸ್ತೆಯನ್ನು ಬೈಕ್‌ನಲ್ಲಿ ಕರೆದೊಯ್ದು ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ತನ್ನ ಪೋಷಕರ ಮನೆಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾಳೆ, ಅಲ್ಲಿ ತನ್ನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾಳೆ. ದೂರಿನ ಪ್ರಕಾರ, ರೋಹಿತ್ ರುಹೇಲಾ ಎಂಬ ವ್ಯಕ್ತಿ ಮಹಿಳೆಯ ಮನೆಗೆ ಬಂದು ಸ್ಟೀಮ್ ಯಂತ್ರವನ್ನು ಕೇಳಿದ್ದಾನೆ. ಸಂತ್ರಸ್ತೆ ಗೇಟ್ ಬಳಿ ಕಾಯಲು ಹೇಳಿದಾಗ, ಅವನು ಬಾಗಿಲು ಮುಚ್ಚಿ, ಅವಳ ಕೋಣೆಗೆ ಪ್ರವೇಶಿಸಿ ಕಿರುಕುಳ ನೀಡಲು ಪ್ರಯತ್ನಿಸಿದ್ದ.

ಮತ್ತಷ್ಟು ಓದಿ: ಕೊಡಗು: ಒಡಹುಟ್ಟಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ, ಆಗಿದ್ದೇನು?

ಈ ವೇಳೆ ಆಕೆಯ ಅತ್ತಿಗೆ ಕೊಠಡಿ ಪ್ರವೇಶಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆದರೆ ಅವರು ನನ್ನನ್ನು ದೂಷಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ