AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶ: ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿರುವ ವ್ಯಕ್ತಿಯ ಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದು ಸೇಡು ತೀರಿಸಿದ ಯುವಕ, ಆರೋಪಿ ಬಂಧನ

ನವೆಂಬರ್ 17 ರಂದು ಬಾಲಕಿ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಣ ಮಾಡಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಆಶಿಶ್ ಜೈನ್ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿರುವ ವ್ಯಕ್ತಿಯ ಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದು ಸೇಡು ತೀರಿಸಿದ ಯುವಕ, ಆರೋಪಿ ಬಂಧನ
ಅತ್ಯಾಚಾರImage Credit source: Hindustan Times
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 29, 2022 | 12:38 PM

Share

ಮಧ್ಯಪ್ರದೇಶದ (Madhya Pradesh) ಸತ್ನಾ ಜಿಲ್ಲೆಯಲ್ಲಿ(Satna)ಏಳು ವರ್ಷದ ಬಾಲಕಿಯ ತಂದೆಯೊಂದಿಗೆ ತನ್ನ ಹೆಂಡತಿಗೆ ವಿವಾಹೇತರ ಸಂಬಂಧ ಇದೆ ಎಂದು ಶಂಕಿಸಿ ಪ್ರತೀಕಾರ ತೀರಿಸಿಕೊಳ್ಳಲು ನೆರೆಹೊರೆಯ ವ್ಯಕ್ತಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ (murder) ಪ್ರಕರಣ ವರದಿ ಆಗಿದೆ.ಸೋಮವಾರ ಅರಣ್ಯ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ. ನವೆಂಬರ್ 17 ರಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ನವೆಂಬರ್ 17 ರಂದು ಬಾಲಕಿ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಣ ಮಾಡಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಆಶಿಶ್ ಜೈನ್ ತಿಳಿಸಿದ್ದಾರೆ. ತನಿಖೆ ನಡೆಸಿದಾಗ ಕಾಲ್ ರೆಕಾರ್ಡ್ ಆಧಾರದ ಮೇಲೆ ಭಾನುವಾರ ರಾಜೇಶ್ ರಜಾಕ್ (31) ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಹೇಳಿದರು. “ರಜಾಕ್ ತಪ್ಪೊಪ್ಪಿಕೊಂಡಿದ್ದಾನೆ. ತನ್ನ ಪತ್ನಿ ನೆರೆಹೊರೆಯವರೊಂದಿಗೆ ವಿವಾಹೇತರ ಸಂಬಂಧವನ್ನು ಹೊಂದಿದ್ದಳು. ಅವನು ಅವಳನ್ನು ತಡೆಯಲು ಪ್ರಯತ್ನಿಸಿದರೂ ಅವಳು ಕೇಳಲಿಲ್ಲ. ಸೇಡು ತೀರಿಸಿಕೊಳ್ಳಲು ನಿರ್ಧರಿಸಿ ಪಕ್ಕದ ಮನೆಯವರ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಕೊಂದು ಶವವನ್ನು ಕಾಡಿನಲ್ಲಿ ಬಿಟ್ಟು ಹೋಗಿದ್ದಾನೆ ಎಂದು ಜೈನ್ ಹೇಳಿದ್ದಾರೆ.

ರಜಾಕ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 302 (ಕೊಲೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.