58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ
ಪ್ರಾತಿನಿಧಿಕ ಚಿತ್ರ
Follow us
ನಯನಾ ರಾಜೀವ್
|

Updated on: Feb 05, 2023 | 3:47 PM

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ. ಆರೋಪಿಯು ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುಂಬಿ, ಆಕೆ ವಾಸಿಸುತ್ತಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕ ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳ ಮೇಲೆ ಕುಡುಗೋಲಿನಿಂದ ಹೊಡೆದಿದ್ದಾನೆ ಮತ್ತು ಆಕೆಯ ಖಾಸಗಿ ಭಾಗಗಳನ್ನು ಗಾಯಗೊಳಿಸಿದ್ದಾನೆ.

ಫೆಬ್ರವರಿ 1 ರಂದು ಮಹಿಳೆಯ ಶವವು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಪತ್ತೆಯಾಗಿತ್ತು. ಪೊಲೀಸರು ಹಾಗೂ ಫೊರೆನ್ಸಿಕ್ ತಂಡವು ಸ್ಥಳಕ್ಕೆ ಆಗಮಿಸಿತ್ತು, ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರೋಪಿ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಟಿವಿ ನೋಡಲು ಮನೆಗೆ ಬರುತ್ತಿದ್ದ ಬಾಲಕನ ಮೇಲೆ ಮೊಬೈಲ್ ಕಳ್ಳತನದ ಆರೋಪ ಮಾಡಿದ್ದರು.

ಮತ್ತಷ್ಟು ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಜನವರಿ 30 ರಂದು ಸಂತ್ರಸ್ತೆಯ ಮಗ ಹಾಗೂ ಪತಿ ಹೊರಗೆ ಹೋಗಿದ್ದಾಗ ಹುಡುಗ ಆಕೆಯ ಮನೆಗೆ ನುಗ್ಗಿದ್ದಾನೆ. ಮಂಚದ ಮೇಲೆ ಮಲಗಿದ್ದ ಮಹಿಳೆಯ ಮೇಲೆ ಆರೋಪಿ ಬಲವಂತವಾಗಿ ಹಲ್ಲೆ ನಡೆಸಿದ್ದಾನೆ, ಮೊದಲು ಬಾಯಿ ಕಟ್ಟಿ ನಂತರ ಹಗ್ಗ ಮತ್ತು ತಂತಿಯ ಸಹಾಯದಿಂದ ಮಹಿಳೆಯ ಮುಖದ ಮೇಲೆ ಪ್ಲಾಸ್ಟಿಕ್ ಚೀಲ ಕಟ್ಟಿ ಕರೆದೊಯ್ದಿದ್ದಾನೆ.

ಬಾಲಕ ಮಹಿಳೆಯನ್ನು ಪದೇ ಪದೇ ಥಳಿಸಿದ್ದ ಮತ್ತು ಪ್ರಜ್ಞೆ ತಪ್ಪಿದಾಗ ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಆರೋಪಿಗಳು ಸಂತ್ರಸ್ತೆಯ ತಲೆ, ಕೈಗಳು, ಕುತ್ತಿಗೆ ಮತ್ತು ಎದೆಯ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಮಹಿಳೆಯ ಮನೆಯಲ್ಲಿಟ್ಟಿದ್ದ 1 ಸಾವಿರ ರೂ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಬಾಲಕ ಪರಾರಿಯಾಗಿದ್ದ, ಇದೀಗ ಪೊಲೀಸರ ಮುಂದೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್