ಮಡಿಕೇರಿ, ಡಿಸೆಂಬರ್ 10: ಮದುವೆ ಮಾಡಿಸುವುದಾಗಿ ಹಣ ಪಡೆದು ಮಾಜಿ ಯೋಧ (soldier) ನಿಗೆ 10 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಕೇರಳ ಮೂಲದ ಜಾನ್ ಮ್ಯಾಥ್ಯೂ ವಂಚನೆಗೊಳಗಾದ ಮಾಜಿ ಯೋಧ. ನ.26ರಂದು ಜಾನ್ ಮ್ಯಾಥ್ಯೂನನ್ನು ಮಡಿಕೇರಿಗೆ ಕರೆಸಿಕೊಂಡಿದ್ದ ಆರೋಪಿಗಳು, ಹೋಂಸ್ಟೇಯೊಂದರಲ್ಲಿ ಯುವತಿಯನ್ನು ತೋರಿಸಿ ವಿವಾಹ ಸಹ ಮಾಡಿಸಿದ್ದರು. ಬಳಿಕ ಯುವತಿ ಜೊತೆಗಿನ ಜಾನ್ನ ಫೋಟೋ ತೆಗೆದುಕೊಂಡ ಆರೋಪಿಗಳು, ಮದುವೆ ಫೋಟೋ ತೋರಿಸಿ ಮಾಜಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ.
ನಾಲ್ವರು ಆರೋಪಿಗಳ ವಿರುದ್ಧ ಕೊಡಗು ಪೊಲೀಸರಿಗೆ ಜಾನ್ ದೂರು ನೀಡಿದ್ದಾರೆ. ಬಂಟ್ವಾಳದ ಅಬ್ದುಲ್‌ಬಷೀರ್(30), ಕಡಬ ನಿವಾಸಿ ಸಾಧಿಕ್(29) ಬಂಧಿತರು. ಬೇರೆ ಕೇಸ್ನಲ್ಲಿ ಈಗಾಗಲೇ ಅರೆಸ್ಟ್ ಆಗಿರುವ ಮತ್ತೋರ್ವ ಆರೋಪಿ ಫೈಸಲ್, ಎ4 ಅಮೀರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ 1.5 ಲಕ್ಷ ನಗದು, ಚೆಕ್ ಜಪ್ತಿ ಮಾಡಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ: ಖಾಸಗಿ ಬಸ್, ಜೀಪ್ ನಡುವೆ ಡಿಕ್ಕಿ ಹೊಡೆದ ಪರಿಣಾಮ 12 ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಂಜರ್ಪಲ್ಕೆ ಬಳಿ ಅಪಘಾತ ಸಂಭವಿಸಿದೆ. ಮುಂಬೈಗೆ ಹೊರಟಿದ್ದ ಖಾಸಗಿ ಬಸ್, ಕಾರ್ಕಳಕ್ಕೆ ಬರುತ್ತಿದ್ದ ಜೀಪ್ ಮಧ್ಯೆ ಡಿಕ್ಕಿ ಆಗಿದೆ. ಗಾಯಾಳುಗಳಿಗೆ ತಾಲೂಕು ಆಸ್ಪತ್ರೆ, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ಸನ್ನ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಲಾಗಿದೆ.
ಇದನ್ನೂ ಓದಿ: ಮಡಿಕೇರಿ ಹೋಮ್ಸ್ಟೇನಲ್ಲಿ ಕೇರಳ ಮೂಲದ ದಂಪತಿ, ಮಗು ಆತ್ಮಹತ್ಯೆ
ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೆ ತುಸು ಹೆಚ್ಚಾಗಿ ಗಾಯವಾಗಿದೆ. ಏಕೆಂದರೆ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭದಲ್ಲೂ ಕೂಡ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗೊಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ತುಸು ಹೆಚ್ಚಾಗೇ ಗಂಭೀರ ಗಾಯವಾಗಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ತಾಲ್ಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಬಳಕಿನ ಮೈ ಕಟ್ಟಿನ ರಸ್ತೆಯೇ ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಹಾವು ಬಳುಕಿನ ಮೈಕಟ್ಟಿನ ರಸ್ತೆಯಾಗಿರುವುದರಿಂದ ಮೂಡಿಗೆರೆ ತಾಲೂಕಿನ ಅಲ್ಲಲ್ಲೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದರೆ, ತರಬೇತಿ ಪಡೆದ ಸರ್ಕಾರಿ ಬಸ್ಸಿನ ಚಾಲಕರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದಕ್ಕೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.