ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರನ್ನ ಮುಂಬೈ ಏರ್​ಪೋರ್ಟ್​ನಲ್ಲಿ ಹಿಡಿದ ಮಾಗಡಿ ಪೊಲೀಸರು

ನಕಲಿ ಪಾಸ್‌ಪೋರ್ಟ್‌ಗಳನ್ನು ಬಳಸಿಕೊಂಡು ಬಹ್ರೇನ್‌ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈ ಆರೋಪಿಗಳಿಂದ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ, 11 ಲಕ್ಷ ರೂ. ನಗದು ಮತ್ತು ಒಂದು ಬಂದೂಕು ವಶಪಡಿಸಿಕೊಳ್ಳಲಾಗಿದೆ.

ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರನ್ನ ಮುಂಬೈ ಏರ್​ಪೋರ್ಟ್​ನಲ್ಲಿ ಹಿಡಿದ ಮಾಗಡಿ ಪೊಲೀಸರು
ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರನ್ನ ಮುಂಬೈ ಏರ್​ಪೋರ್ಟ್​ನಲ್ಲಿ ಹಿಡಿದ ಮಾಗಡಿ ಪೊಲೀಸರು
Edited By:

Updated on: Nov 04, 2024 | 7:45 PM

ರಾಮನಗರ, ನವೆಂಬರ್​ 04: ನಕಲಿ ಪಾಸ್​​ಪೋರ್ಟ್ ಬಳಸಿ ಬಹ್ರೇನ್​ಗೆ (Bahrain) ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರಿಬ್ಬರನ್ನು ಮಾಗಡಿ ಪೊಲೀಸರು ಮುಂಬೈ ಏರ್​ಪೋರ್ಟ್ ಬಳಿ ಬಂಧಿಸಿದ್ದಾರೆ. ಕಡೂರು ಸಾದಿಕ್(40), ಹಮ್ಜಾ ಅಲಿಯಾಸ್ ಅಮೀರ್(39)‌ ಬಂಧಿತರು. ಜಿಲ್ಲೆಯ ನಾಲ್ವರು ಇನ್ಸ್​ಪೆಕ್ಟರ್​ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಹಿಡಿಯಲಾಗಿದೆ. ಸದ್ಯ ಮಾಗಡಿ ಪೊಲೀಸರ ಕಾರ್ಯಾಚರಣೆಗೆ ಮುಂಬೈ ಪೊಲೀಸರು ಶಾಕ್ ಆಗಿದ್ದಾರೆ.

3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ 

ಬಂಧಿತರಿಬ್ಬರು ಸುಮಾರು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಕಲಿ ಪಾಸ್​​ಪೋರ್ಟ್ ಬಳಸಿ ಏರ್​ಪೋರ್ಟ್​ ಪೊಲೀಸರನ್ನೇ ಯಾಮಾರಿಸಿದ್ದರು. ಇಬ್ಬರು ಆರೋಪಿಗಳ ಬಳಿ 1 ಗನ್ ಹಾಗೂ 5 ಜೀವಂತ ಗುಂಡು, 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 11,49,000 ನಗದು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಸೆ.22ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ ದೋಚಿಕೊಂಡು ಪರಾರಿಯಾಗಿದ್ದರು. ಬ್ಯಾಡಗಿ ಶಾಸಕರ ನಿವಾಸದಲ್ಲೂ ಬಂಧಿತ ಆರೋಪಿಗಳು ಕನ್ನ ಹಾಕಿದ್ದರು.

ಆರೋಪಿಗಳ ಸೆರೆಗೆ ಎಸ್​​ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು. ಜಿಲ್ಲೆಯ ಮಾಗಡಿ ಠಾಣೆಯ ಇನ್ಸ್​ಪೆಕ್ಟರ್​ ಜಿ.ವೈ.ಗಿರಿರಾಜ್​, ಕುಂಬಳಗೋಡು ಇನ್ಸ್​ಪೆಕ್ಟರ್ ಮಂಜುನಾಥ್, ತಾವರಗೆರೆ ಪಿಐ​ ಮೋಹನ್, ಕುದೂರು ಠಾಣೆಯ ಇನ್ಸ್​ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 25 ಪೊಲೀಸ್​ ಸಿಬ್ಬಂದಿ ಭಾಗಿಯಾಗಿದ್ದರು.

ಇದನ್ನೂ ಓದಿ: ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್​ ಮಾಡಿದ್ದಾರೆ. ಬಿಎಂಡಬ್ಲ್ಯು, ಸ್ಕೋಡಾ, ಎಸ್​​ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್​ ದೇಶಕ್ಕೆ ತೆರಳಲು ಮುಂದಾಗಿದ್ದಾರೆ.

ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ

ಪೊಲೀಸರನ್ನು ಕಂಡು ಗನ್​ ತೆಗೆಯಲು ಯತ್ನಿಸಿದ್ದ ವೇಳೆ ಇಬ್ಬರ ಬಂಧನ ಮಾಡಲಾಗಿದೆ. ಕಳ್ಳರ ಹಿಸ್ಟರಿ ನೋಡಿ ಮುಂಬೈ ಪೊಲೀಸರಿಂದ ಏರ್​ಪೋರ್ಟ್​ನಲ್ಲಿ ತಪಾಸಣೆ ಮಾಡಲಾಗಿದ್ದು, ಈ ಹಿಂದೆ ಹಲವು ಬಾರಿ ಬೇರೆ ಬೇರೆ ದೇಶಗಳಿಗೆ ತೆರಳಿದ್ದು ಗೊತ್ತಾಗಿದೆ. ಸದ್ಯ ಕಳ್ಳರನ್ನು ಸೆರೆಹಿಡಿದ ಪೊಲೀಸರಿಗೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಸನ್ಮಾನ ಮಾಡುವಂತೆ ಎಸ್​ಪಿಯಿಂದ ಪತ್ರ ಬರೆಯಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us