ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಕೃತ್ಯ ನಡೆಯುವಾಗ ವ್ಯಕ್ತಿ ತುಂಬಾ ಕುಡಿದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ, ಅಪರಾಧದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ
ಅಪರಾಧ
Follow us
ನಯನಾ ರಾಜೀವ್
|

Updated on: Jun 12, 2024 | 12:09 PM

ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಕಾಸರ ಪ್ರದೇಶದ ವಾಶಾಲಾದಲ್ಲಿ ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಈ ಕೃತ್ಯ ನಡೆಯುವಾಗ ವ್ಯಕ್ತಿ ತುಂಬಾ ಕುಡಿದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ, ಅಪರಾಧದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೌಟುಂಬಿಕ ಕಲಹಗಳ ಹಿನ್ನೆಲೆಯಲ್ಲಿ ವ್ಯಕ್ತಿ ಮತ್ತು ಆತನ ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಬಾಲಕ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ತಾಯಿ ಮನೆಯಿಂದ ಬಾಲಕ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪ್ರಾಪ್ತ ಬಾಲಕ ತನ್ನ ತಂದೆಯ ಮನೆಯ ಬಳಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಇನ್‌ಸ್ಟಾಗ್ರಾಂನಲ್ಲಿ ಯುವಕರೊಂದಿಗೆ ಹೆಂಡತಿ ಚಾಟ್; ಗಂಡ ವಿರೋಧಿಸಿದ್ದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

ಎಚ್ಚರಿಕೆ ನೀಡಿದ ನಂತರ, ಪೊಲೀಸರು ಸ್ಥಳಕ್ಕೆ ಹೋದರು ಆಗ ಬಾಲಕನ ಬಾಯಲ್ಲಿ ಕಾಗದದ ಚೆಂಡು ಇರುವುದು ಜತೆಗೆ ಮೂಗನಲ್ಲಿ ರಕ್ತಸ್ರಾವವಾಗಿರುವುದನ್ನು ಗಮನಿಸಿದ್ದಾರೆ. ತನ್ನ ಪತ್ನಿ ಪ್ರತ್ಯೇಕವಾಗಿ ಉಳಿದುಕೊಳ್ಳಲು ಶುರುಮಾಡಿದ ಬಳಿಕ ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದ.

ಹಾಗೆಯೇ ಮಂಗಳವಾರ ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ನೋಟ್​ಬುಕ್​ನ ಹಾಳೆಗಳನ್ನು ಹರಿದು ಉಂಡೆಯ ರೀತಿ ಮಾಡಿ ಮಗನ ಬಾಯಿಗೆ ತುರುಕಿ ಹತ್ಯೆ ಮಾಡಿದ್ದಾನೆ.

ಮೃತ ಬಾಲಕನ ಸಂಬಂಧಿಯೊಬ್ಬರು ನೀಡಿದ ದೂರಿನ ಮೇರೆಗೆ ಮಂಗಳವಾರ ರಾತ್ರಿ ಆರೋಪಿಯನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್