ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Mar 24, 2023 | 8:31 AM

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ದೂರದ ಉಪನಗರವಾದ ವಿರಾರ್‌ನ ಸಾಯಿನಾಥ್ ನಗರ ಪ್ರದೇಶದ ನಿವಾಸಿಗಳಾದ ಇಬ್ಬರ ವಿರುದ್ಧ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಇಬ್ಬರು ವಾಕಿಂಗ್​ಗೆ ಹೋಗಿದ್ದಾಗ ಘಟನೆ ನಡೆದಿದೆ, ಈ ವಿಚಾರ ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಅನೈತಿಕ ಸಂಬಂಧ ಪ್ರಶ್ನಿಸಿದ ಅಜ್ಜಿಯನ್ನೇ ಕೊಂದ ಪಾಪಿಗಳು

ಆರೋಪಿ ಹಾಗೂ ಆಕೆಯ ಪ್ರಿಯಕರನ ನಡುವೆ ವಾಗ್ವಾದ ನಡೆದು ಇಬ್ಬರು ಖಾಲಿ ಬಿಯರ್ ಬಾಟಲಿಯಿಂದ ಹೊಡೆದು, ಇಬ್ಬರೂ ಸೇರಿ ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂತರ ಇಬ್ಬರೂ ಯುವತಿಯನ್ನು ಪ್ರತ್ಯೇಕ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಆರೋಪಿಗಳಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ, ಮನೆಗೆ ತಲುಪಿ ವಿಷಯ ತಿಳಿಸಿದ ಬಳಿಕ ಪೊಲೀಸರ ಸಹಾಯದಿಂದ ಆ ಯುವಕನನ್ನೂ ರಕ್ಷಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ