ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸ್
Image Credit source: NDTV

Updated on: Mar 24, 2023 | 8:31 AM

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ದೂರದ ಉಪನಗರವಾದ ವಿರಾರ್‌ನ ಸಾಯಿನಾಥ್ ನಗರ ಪ್ರದೇಶದ ನಿವಾಸಿಗಳಾದ ಇಬ್ಬರ ವಿರುದ್ಧ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಇಬ್ಬರು ವಾಕಿಂಗ್​ಗೆ ಹೋಗಿದ್ದಾಗ ಘಟನೆ ನಡೆದಿದೆ, ಈ ವಿಚಾರ ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಅನೈತಿಕ ಸಂಬಂಧ ಪ್ರಶ್ನಿಸಿದ ಅಜ್ಜಿಯನ್ನೇ ಕೊಂದ ಪಾಪಿಗಳು

ಆರೋಪಿ ಹಾಗೂ ಆಕೆಯ ಪ್ರಿಯಕರನ ನಡುವೆ ವಾಗ್ವಾದ ನಡೆದು ಇಬ್ಬರು ಖಾಲಿ ಬಿಯರ್ ಬಾಟಲಿಯಿಂದ ಹೊಡೆದು, ಇಬ್ಬರೂ ಸೇರಿ ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂತರ ಇಬ್ಬರೂ ಯುವತಿಯನ್ನು ಪ್ರತ್ಯೇಕ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆ ಆರೋಪಿಗಳಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ, ಮನೆಗೆ ತಲುಪಿ ವಿಷಯ ತಿಳಿಸಿದ ಬಳಿಕ ಪೊಲೀಸರ ಸಹಾಯದಿಂದ ಆ ಯುವಕನನ್ನೂ ರಕ್ಷಿಸಲಾಯಿತು.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us