ಮಹಾರಾಷ್ಟ್ರ: ಊಟದ ವಿಚಾರಕ್ಕೆ ಜಗಳ, ಕೋಪದಲ್ಲಿ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ

ತಾಯಿ, ಮಗನ ಮಧ್ಯೆ ಊಟದ ವಿಚಾರಕ್ಕೆ ಆರಂಭವಾದ ಜಗಳ ತಾಯಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 26 ವರ್ಷದ ಯುವಕನೊಬ್ಬ ತನ್ನ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

ಮಹಾರಾಷ್ಟ್ರ: ಊಟದ ವಿಚಾರಕ್ಕೆ ಜಗಳ, ಕೋಪದಲ್ಲಿ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ
ಬೆಂಕಿ-ಸಾಂದರ್ಭಿಕ ಚಿತ್ರ
Image Credit source: India Today

Updated on: Oct 26, 2023 | 9:56 AM

ತಾಯಿ, ಮಗನ ಮಧ್ಯೆ ಊಟದ ವಿಚಾರಕ್ಕೆ ಆರಂಭವಾದ ಜಗಳ ತಾಯಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 26 ವರ್ಷದ ಯುವಕನೊಬ್ಬ ತನ್ನ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

ಸಂಜೆ ರೇವದಂಡ ಬಳಿಯ ನವಖರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಹದಾದ್ಯಂತ ಗಂಭೀರವಾದ ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಹಿಳೆ ಇಂದು ಬೆಳಗ್ಗೆ ಅಲಿಬಾಗ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಮೃತರನ್ನು ಚಂಗುನಾ ನಾಮದೇ ಖೋಟ್ ಎಂದು ಗುರುತಿಸಲಾಗಿದೆ.

ಊಟ ತಯಾರಿಸಿ ಬಡಿಸುವ ವಿಚಾರದಲ್ಲಿ ಜಗಳವಾಡಿ ಮಗ ಜಯೇಶ್ ಆಕೆಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ, ಅವನು ಅವಳನ್ನು ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು, ಒಣಮರವನ್ನು ಸಂಗ್ರಹಿಸಿ ಬೆಂಕಿ ಹಚ್ಚಿದನು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ಘಟನೆಯ ಬಗ್ಗೆ ಮಾಹಿತಿ ಪಡೆದ ರಾವದಂಡ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಸಮೀಪದ ಅರಣ್ಯದಿಂದ ಪೊಲೀಸ್ ತಂಡ ಜಯೇಶ್‌ನನ್ನು ಬಂಧಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:55 am, Thu, 26 October 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us