Maharashtra Crime: ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ

ಪಶುವೈದ್ಯನೊಬ್ಬ ಪತ್ನಿಯನ್ನು ಹತ್ಯೆ ಮಾಡಿ, ಮಕ್ಕಳನ್ನು ಬಾವಿಗೆ ಎಸೆದು ಕೊನೆಗೂ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಈ ಘಟನೆ ಪುಣೆಯಲ್ಲಿ ನಡೆದಿದೆ.

Maharashtra Crime: ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ
ಪೊಲೀಸ್
Image Credit source: NDTV

Updated on: Jun 21, 2023 | 8:04 AM

ಪಶುವೈದ್ಯನೊಬ್ಬ ಪತ್ನಿಯನ್ನು ಹತ್ಯೆ ಮಾಡಿ, ಮಕ್ಕಳನ್ನು ಬಾವಿಗೆ ಎಸೆದು ಕೊನೆಗೂ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಈ ಘಟನೆ ಪುಣೆಯಲ್ಲಿ ನಡೆದಿದೆ. ವರವಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಡಾ ಅತುಲ್ ದಿವೇಕರ್ (42), ಪಲ್ಲವಿ ದಿವೇಕರ್ (39) ಮತ್ತು ಅವರ ಮಕ್ಕಳಾದ ಅದ್ವೈತ್ (9) ಮತ್ತು ವೇದಾಂತಿ (6) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಡಾ.ದಿವೇಕರ್ ಮೊದಲು ಮನೆಯಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮಕ್ಕಳನ್ನು ತನ್ನ ಮನೆಯ ಸಮೀಪವಿರುವ ಬಾವಿಗೆ ಎಸೆದಿದ್ದಾನೆ.

ಬಳಿಕ ಮನೆಗೆ ಬಂದು ನೇಣು ಬಿಗಿದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿದೆ.

ಮತ್ತಷ್ಟು ಓದಿ: ಹೈದರಾಬಾದ್: ಅಪ್ರಾಪ್ತ ಸೋದರಳಿಯನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಅತುಲ್ ಬಿಟ್ಟು ಹೋಗಿರುವ ಸೂಸೈಡ್ ನೋಟ್‌ನಲ್ಲಿ ಆತನ ಪತ್ನಿಯ ಚಿತ್ರಹಿಂಸೆ ಆತನ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us