AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crime: ಪತ್ನಿಗೆ ಬೈದಿದ್ದಕ್ಕೆ ತಮ್ಮನನ್ನೇ ಕೊಲೆ ಮಾಡಿದ ಅಣ್ಣ

ಪತ್ನಿಗೆ ಬೈದನೆಂದು ವ್ಯಕ್ತಿಯೊಬ್ಬ ತನ್ನ ತಮ್ಮನನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪತ್ನಿ ವಿರುದ್ಧ ಮಾತನಾಡಿದ್ದಕ್ಕೆ ಕೋಪಗೊಂಡು ಆತನನ್ನು ಹೊಡೆದು ಕೊಂದಿದ್ದಾನೆ. ನಗರದ ಹಿಂಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೊದಲು ಸಹಜ ಸಾವೆಂದು ಪರಿಗಣಿಸಲಾಗಿದ್ದು, ಆದರೆ ಮರಣೋತ್ತರ ಪರೀಕ್ಷೆಯಲ್ಲಿ ನಿಜವಾದ ವಿಷಯ ಬಯಲಾಗಿದೆ.

Maharashtra Crime: ಪತ್ನಿಗೆ ಬೈದಿದ್ದಕ್ಕೆ ತಮ್ಮನನ್ನೇ ಕೊಲೆ ಮಾಡಿದ ಅಣ್ಣ
ಜೈಲು ಕಂಬಿImage Credit source: Getty Images
ನಯನಾ ರಾಜೀವ್
|

Updated on:Sep 05, 2024 | 2:43 PM

Share

ಪತ್ನಿಗೆ ಬೈದಿದ್ದಕ್ಕೆ ಅಣ್ಣನೊಬ್ಬ ತನ್ನ ತಮ್ಮನನ್ನೇ ಕೊಲೆ(Murder) ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತ್ನಿ ವಿರುದ್ಧ ಮಾತನಾಡಿದ್ದಕ್ಕೆ ಕೋಪಗೊಂಡು ಆತನನ್ನು ಹೊಡೆದು ಕೊಂದಿದ್ದಾರೆ. ನಗರದ ಹಿಂಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾವುದೋ ವಿಚಾರಕ್ಕೆ ತೀವ್ರ ವಾಗ್ವಾದ ನಡೆದಿತ್ತು, ಬಳಿಕ ಗೋವಿಂದ್ ಚೌಕೆ ಕೋಪದಲ್ಲಿ ತನ್ನ ಸಹೋದರ ಕಿಸಾನ್ ಮೇಲೆ ಹಲ್ಲೆ ನಡೆಸಿದ್ದಾನೆ. ಸಹೋದರರು ಮತ್ತು ಅವರ ಕುಟುಂಬಗಳು ತಮ್ಮ ತಾಯಿಯೊಂದಿಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು.

ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ಕಿಸಾನ್ ಗೋವಿಂದ್ ಅವರ ಪತ್ನಿಯನ್ನು ನಿಂದಿಸಿದ ನಂತರ ಸಹೋದರರ ನಡುವೆ ವಾಗ್ವಾದ ಶುರುವಾಗಿತ್ತು. ಕೋಪಗೊಂಡ ಗೋವಿಂದ್ ಕಿಸಾನ್ ಅವರ ಎದೆ ಮತ್ತು ತಲೆಗೆ ಹಲವಾರು ಬಾರಿ ಹೊಡೆದಿದ್ದ ಪರಿಣಾಮ ಕಿಸಾನ್ ಗಂಭೀರವಾಗಿ ಗಾಯಗೊಂಡಿದ್ದರು.

ಮತ್ತಷ್ಟು ಓದಿ: Crime News: ಮದುವೆಯ ಶಾಪಿಂಗ್​ಗೆ ಹೋಗುತ್ತಿದ್ದವರ ಹತ್ಯೆ; ಪಂಜಾಬ್‌ನ ಫಿರೋಜ್‌ಪುರದಲ್ಲಿ ತ್ರಿವಳಿ ಕೊಲೆ

ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಹೇಳಿದರು ಎಂದು ಹಿಂಗ್ನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದರು, ಆದರೆ ಬುಧವಾರದ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತೀವ್ರ ಗಾಯಗಳಿಂದಾಗಿ ಸಾವನ್ನಪ್ಪಿದ್ದಾ ಎಂಬುದಾಗಿ ತಿಳಿಸಿದ್ದಾರೆ.

ಇದರಿಂದ ಪೊಲೀಸರು ಗೋವಿಂದ್ ನನ್ನು ವಿಚಾರಣೆಗೊಳಪಡಿಸಿದ್ದು, ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಂತರ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:41 pm, Thu, 5 September 24

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ