ಪತ್ನಿಗೆ ಬೈದಿದ್ದಕ್ಕೆ ಅಣ್ಣನೊಬ್ಬ ತನ್ನ ತಮ್ಮನನ್ನೇ ಕೊಲೆ(Murder) ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತ್ನಿ ವಿರುದ್ಧ ಮಾತನಾಡಿದ್ದಕ್ಕೆ ಕೋಪಗೊಂಡು ಆತನನ್ನು ಹೊಡೆದು ಕೊಂದಿದ್ದಾರೆ. ನಗರದ ಹಿಂಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾವುದೋ ವಿಚಾರಕ್ಕೆ ತೀವ್ರ ವಾಗ್ವಾದ ನಡೆದಿತ್ತು, ಬಳಿಕ ಗೋವಿಂದ್ ಚೌಕೆ ಕೋಪದಲ್ಲಿ ತನ್ನ ಸಹೋದರ ಕಿಸಾನ್ ಮೇಲೆ ಹಲ್ಲೆ ನಡೆಸಿದ್ದಾನೆ. ಸಹೋದರರು ಮತ್ತು ಅವರ ಕುಟುಂಬಗಳು ತಮ್ಮ ತಾಯಿಯೊಂದಿಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು.
ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ಕಿಸಾನ್ ಗೋವಿಂದ್ ಅವರ ಪತ್ನಿಯನ್ನು ನಿಂದಿಸಿದ ನಂತರ ಸಹೋದರರ ನಡುವೆ ವಾಗ್ವಾದ ಶುರುವಾಗಿತ್ತು. ಕೋಪಗೊಂಡ ಗೋವಿಂದ್ ಕಿಸಾನ್ ಅವರ ಎದೆ ಮತ್ತು ತಲೆಗೆ ಹಲವಾರು ಬಾರಿ ಹೊಡೆದಿದ್ದ ಪರಿಣಾಮ ಕಿಸಾನ್ ಗಂಭೀರವಾಗಿ ಗಾಯಗೊಂಡಿದ್ದರು.
ಮತ್ತಷ್ಟು ಓದಿ:
Crime News: ಮದುವೆಯ ಶಾಪಿಂಗ್ಗೆ ಹೋಗುತ್ತಿದ್ದವರ ಹತ್ಯೆ; ಪಂಜಾಬ್‌ನ ಫಿರೋಜ್‌ಪುರದಲ್ಲಿ ತ್ರಿವಳಿ ಕೊಲೆ
ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಹೇಳಿದರು ಎಂದು ಹಿಂಗ್ನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದರು, ಆದರೆ ಬುಧವಾರದ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತೀವ್ರ ಗಾಯಗಳಿಂದಾಗಿ ಸಾವನ್ನಪ್ಪಿದ್ದಾ ಎಂಬುದಾಗಿ ತಿಳಿಸಿದ್ದಾರೆ.
ಇದರಿಂದ ಪೊಲೀಸರು ಗೋವಿಂದ್ ನನ್ನು ವಿಚಾರಣೆಗೊಳಪಡಿಸಿದ್ದು, ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಂತರ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:41 pm, Thu, 5 September 24