Maharashtra: ಯೂಟ್ಯೂಬ್​ ನೋಡಿ ಶಿಶುವಿಗೆ ಜನ್ಮ ನೀಡಿ, ಬಳಿಕ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ ಅಪ್ರಾಪ್ತ ಬಾಲಕಿ

ಅಪ್ರಾಪ್ತ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋವನ್ನು ನೋಡಿ ಮಗುವಿಗೆ ಜನ್ಮ ನೀಡಿ ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

Maharashtra: ಯೂಟ್ಯೂಬ್​ ನೋಡಿ ಶಿಶುವಿಗೆ ಜನ್ಮ ನೀಡಿ, ಬಳಿಕ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ ಅಪ್ರಾಪ್ತ ಬಾಲಕಿ
ಶಿಶು
Follow us
ನಯನಾ ರಾಜೀವ್
|

Updated on: Mar 06, 2023 | 9:12 AM

ಅಪ್ರಾಪ್ತ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋವನ್ನು ನೋಡಿ ಮಗುವಿಗೆ ಜನ್ಮ ನೀಡಿ ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಅಲ್ಲಿಯ 15 ವರ್ಷದ ಅಪ್ರಾಪ್ತ ಬಾಲಕಿ ಯೂಟ್ಯೂಬ್ ವಿಡಿಯೋ ಸಹಾಯದಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ, ನಂತರ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿದ್ದಾಳೆ. ಇಲ್ಲಿ ನವಜಾತ ಶಿಶುವನ್ನು ಕೊಂದು ಬಳಿಕ ಮೃತದೇಹವನ್ನು ತನ್ನ ಮನೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಾಳೆ.

ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಯ ಪ್ರಕಾರ, ಅಪ್ರಾಪ್ತ ವಯಸ್ಕಳನ್ನು ವಿಚಾರಣೆಗೆ ಒಳಪಡಿಸಿದಾಗ, ಆಕೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯವಾಗಿರುವುದು ಕಂಡುಬಂದಿದೆ. ಅಷ್ಟರಲ್ಲಿ ರಮೇಶ್ ಠಾಕೂರ್ ಎಂಬ ವ್ಯಕ್ತಿಯ ಪರಿಚಯವಾಯಿತು.

ಸಂಭಾಷಣೆ ಕ್ರಮೇಣ ಪ್ರೀತಿಗೆ ತಿರುಗಿತು ಮತ್ತು ನಂತರ ಇಬ್ಬರೂ ಭೇಟಿಯಾಗಲು ಪ್ರಾರಂಭಿಸಿದರು. ಒಂದು ದಿನ, ಹುಡುಗಿಯನ್ನು ಪ್ರೇರೇಪಿಸುವ ಮೂಲಕ, ಅವನು ಅವಳೊಂದಿಗೆ ಬಲವಂತವಾಗಿ ದೈಹಿಕ ಸಂಬಂಧವನ್ನು ಹೊಂದಿದ್ದನು, ಇದರಿಂದಾಗಿ ಅವಳು ಗರ್ಭಿಣಿಯಾದಳು. ತನಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ ಎಂದು ಕುಟುಂಬ ಸದಸ್ಯರಿಗೆ ಗೊತ್ತಾಗದಂತೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು, ಆಕೆ ಗರ್ಭಿಣಿಯಾಗಿದ್ದು ಯಾರಿಗೂ ತಿಳಿದಿರಲಿಲ್ಲ.

ಮಾ.3ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋವು ಕಾಣಿಸಿಕೊಂಡಿತ್ತು. ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಮತ್ತು ನಂತರ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿದ್ದಾಳೆ. ಈ ವಿಚಾರ ಕುಟುಂಬಸ್ಥರಿಗೆ ತಿಳಿಯದ ಕಾರಣ ನವಜಾತ ಶಿಶುವಿನ ಮೃತದೇಹವನ್ನು ಪ್ಲಾಸ್ಟಿಕ್ ಬಾಕ್ಸ್ ನಲ್ಲಿ ಹಾಕಿ ಮನೆಯಲ್ಲೇ ಬಚ್ಚಿಟ್ಟಿದ್ದಳು.

ಮತ್ತಷ್ಟು ಓದಿ:ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ಮನೆಗೆ ಮರಳಿದ ತಾಯಿ ಮಗಳ ಆರೋಗ್ಯದ ಬಗ್ಗೆ ವಿಚಾರಿಸಿದರು. ಬಾಲಕಿ ಭಯದಿಂದ ಬಂದು ತನ್ನ ತಾಯಿಗೆ ಇಡೀ ಘಟನೆಯನ್ನು ಹೇಳಿದ್ದಾಳೆ, ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಾದ ನಂತರ ವಿಷಯ ನಾಗಪುರದ ಅಂಬಾಝರಿ ಪೊಲೀಸ್ ಠಾಣೆಗೆ ತಲುಪಿತ್ತು.

ಪೊಲೀಸರು ನವಜಾತ ಶಿಶುವಿನ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅದೇ ವೇಳೆ ಅಪ್ರಾಪ್ತ ಬಾಲಕಿಯ ಮಾಹಿತಿ ಮೇರೆಗೆ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ