Maharashtra: ಸೆಪ್ಟಿಕ್ ಟ್ಯಾಂಕ್‌ಗೆ ಜಾರಿಬಿದ್ದು ಇಬ್ಬರು ಕಾರ್ಮಿಕರು ಸಾವು

ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಇಬ್ಬರು ಕಾರ್ಮಿಕರು ಸೆಪ್ಟಿಕ್ ಟ್ಯಾಂಕ್‌ಗೆ ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ವಘೋಲಿ ಪ್ರದೇಶದ ಸೊಲಿಸಿಯಾ ಸೊಸೈಟಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

Maharashtra: ಸೆಪ್ಟಿಕ್ ಟ್ಯಾಂಕ್‌ಗೆ ಜಾರಿಬಿದ್ದು ಇಬ್ಬರು ಕಾರ್ಮಿಕರು ಸಾವು
Two laborers died after falling into septic tank
Edited By:

Updated on: Oct 21, 2022 | 2:38 PM

ಪುಣೆ: ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಇಬ್ಬರು ಕಾರ್ಮಿಕರು ಸೆಪ್ಟಿಕ್ ಟ್ಯಾಂಕ್‌ಗೆ ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ವಘೋಲಿ ಪ್ರದೇಶದ ಸೊಲಿಸಿಯಾ ಸೊಸೈಟಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.  ಮತ್ತೊಬ್ಬ ಕಾರ್ಮಿಕ ಟ್ಯಾಂಕ್‌ನಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 6.00 ಗಂಟೆಗೆ ಕಾರ್ಮಿಕರು ಸೆಪ್ಟಿಕ್ ಚೇಂಬರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ 7 ಗಂಟೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.ಮೃತರನ್ನು ಬುಲ್ಧಾನದ ನಿತಿನ್ ಪ್ರಭಾಕರ್ ಗೊಂಡ್ (45) ಮತ್ತು ಉತ್ತರ ಪ್ರದೇಶದ ಸತೀಶ್‌ಕುಮಾರ್ ಚೌಧರಿ (35) ಎಂದು ಗುರುತಿಸಲಾಗಿದೆ.

ಇದನ್ನು ಓದಿ: Crime News: ಗಾಜಿಯಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು; ಸುಳ್ಳು ಹೇಳಿ ಸಿಕ್ಕಿಬಿದ್ದ ಮಹಿಳೆ

ನಾಸಿಕ್‌ ಮತ್ತೊಬ್ಬ ಕಾರ್ಮಿಕ ಗಣೇಶ್ ಪಾಲೆಕ್ರಾವ್ (28) ಅವರನ್ನು ಇನ್ನೂ ಸೆಪ್ಟಿಕ್ ಟ್ಯಾಂಕ್‌ನಿಂದ ಹೊರತೆಗೆದಿಲ್ಲ. ಈ ಕಾರ್ಮಿಕರು ಗುತ್ತಿಗೆದಾರ ಗಜಾನನ ಕುರಂಭಟ್ಟಿ ಅವರ ಬಳಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

Published On - 2:38 pm, Fri, 21 October 22