AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವಿನ ಹಣ್ಣಿನ ಜ್ಯೂಸ್​ಗೆ ನಿದ್ರೆ ಮಾತ್ರೆ ಬೆರೆಸಿ ಗಂಡ, ಅತ್ತೆಗೆ ಕೊಟ್ಟ ಮಹಿಳೆ, ಹತ್ಯೆಗೆ ಸಂಚು?

ಮಹಿಳೆಯೊಬ್ಬಳು ಗಂಡ ಹಾಗೂ ಮನೆಯವರಿಗೆ ಮಾವಿನ ಹಣ್ಣಿನ ಜ್ಯೂಸ್​ನಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆದರೆ ಯಾವ ಕಾರಣದಿಂದ ಈ ಕೆಲಸ ಮಾಡಿದ್ದಾರೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

ಮಾವಿನ ಹಣ್ಣಿನ ಜ್ಯೂಸ್​ಗೆ ನಿದ್ರೆ ಮಾತ್ರೆ ಬೆರೆಸಿ ಗಂಡ, ಅತ್ತೆಗೆ ಕೊಟ್ಟ ಮಹಿಳೆ, ಹತ್ಯೆಗೆ ಸಂಚು?
ಮಾವಿನ ಹಣ್ಣಿನ ಜ್ಯೂಸ್​
ನಯನಾ ರಾಜೀವ್
|

Updated on: May 30, 2024 | 3:13 PM

Share

ಉರಿ ಬಿಸಿಲಿನಲ್ಲಿ ಮನೆಯಲ್ಲಿ ತಂಪಾದ ಪಾನೀಯವನ್ನು ಕುಡಿಯಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಹಾಗೆಯೇ ಮಹಿಳೆಯೊಬ್ಬರು ತನ್ನ ಗಂಡ ಹಾಗೂ ಮನೆಯವರಿಗೆ ಮಾವಿನ ಹಣ್ಣಿನ ಜ್ಯೂಸ್​ನಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿರುವ ಘಟನೆ ಮಹಾರಾಷ್ಟ್ರದ ತುಳಜಾಪುರದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಪತ್ನಿ ಭಾಗ್ಯವತಿ ಚಿಂಗುಂಡೆ ವಿರುದ್ಧ ನಲದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಹೇಶ್​ ಕುಮಾರ ಚಿಂಗುಂಡೆ ತುಳಜಾಪುರ ತಾಲೂಕಿನ ನಂದಗಾಂವ್​ದವರು. ಮೇ 24 ರಂದು ಸಂಜೆ ಊಟಕ್ಕೆ ಬೇಗ ಬರುವಂತೆ ಪತ್ನಿಗೆ ಪತಿಗೆ ಹೇಳಿದ್ದರು.

ಮತ್ತಷ್ಟು ಓದಿ: ಕೊಪ್ಪಳ: ತನ್ನನ್ನು ಬಿಟ್ಟು ಸಹೋದರನನ್ನು ಮದ್ವೆಯಾಗಿದ್ದಕ್ಕೆ ಮೂವರನ್ನ ಕೊಂದ ಭಗ್ನ ಪ್ರೇಮಿ

ಊಟದ ಬಳಿಕ ಮಾವಿನ ಹಣ್ಣಿನ ಜ್ಯೂಸ್​ಗೆ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದಾದ ಬಳಿಕ ಮಹೇಶಕುಮಾರ ಚಿಂಗುಂಡೆ ಹಾಗೂ ಅವರ ಮನೆಯ ಇತರ ಸದಸ್ಯರು ಅಸ್ವಸ್ಥಗೊಂಡಿದ್ದರು. ತಡವಾಗಿ ಮಲಗಿದ್ದರು, ಅಲ್ಲದೆ ನಿದ್ರೆಯಿಂದ ಎದ್ದ ನಂತರ ದೇಹದಲ್ಲಿ ಅಪಾರ ನೋವು ಕಾಣಿಸಿಕೊಂಡಿತ್ತು. ಇದಾಇ ಬಳಿಕ ಆಕೆ ಜ್ಯೂಸ್​ನಲ್ಲಿ ಏನೋ ಬೆರೆಸಿದ್ದಳು ಎಂಬುದು ಗೊತ್ತಾಗಿದೆ. ತಕ್ಷಣ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ನಲದುರ್ಗ ಪೊಲೀಸ್ ಠಾಣೆಯಲ್ಲಿ ಭಾಗ್ಯವತಿ ಚಿಂಗುಂಡೆ ವಿರುದ್ಧ ಸೆಕ್ಷನ್ 328ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಭಾಗ್ಯವತಿ ಜ್ಯೂಸ್‌ನಲ್ಲಿ ಏಕೆ ಮಾತ್ರೆಗಳನ್ನು ಹಾಕಿದ್ದರು, ಇದರ ಹಿಂದಿರುವ ಉದ್ದೇಶವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!