AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪಿಸ್ಟ್​ಗೆ ಗಲ್ಲು: ಠಾಣೆಯನ್ನು ಮದುವಣಗಿತ್ತಿಯಂತೆ ಶೃಂಗರಿಸಿ ಸಂಭ್ರಮಿಸಿದರು ಪೊಲೀಸರು!

ಮಹಾರಾಷ್ಟ್ರ:ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳಿಗೆ ಬುಲ್ಖಾನ ವಿಶೇಷ ಸೆಷನ್ಸ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅತ್ಯಾಚಾರಿಗಳನ್ನು ಬಂಧಿಸಿದ್ದ ಪೊಲೀಸರು ತಮ್ಮ  ಪೊಲೀಸ್ ಠಾಣೆಯನ್ನು ಮದುವಣಗಿತ್ತಿಯಂತೆ ಶೃಂಗರಿಸಿ ಸಂಭ್ರಮಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 2019ರ ಏಪ್ರಿಲ್ 26ರಂದು ಸಾಗರ್ ಮತ್ತು ನಿಖಿಲ್ ಎಂಬ ಕೀಚಕರು ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆಯ ತಂದೆ ಚಿಕ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತಕ್ಷಣವೇ ಕಾರ್ಯೋನ್ಮುಖರಾದ ಪೊಲೀಸರು ಆರೋಪಿಗಳನ್ನು […]

ರೇಪಿಸ್ಟ್​ಗೆ ಗಲ್ಲು: ಠಾಣೆಯನ್ನು ಮದುವಣಗಿತ್ತಿಯಂತೆ ಶೃಂಗರಿಸಿ ಸಂಭ್ರಮಿಸಿದರು ಪೊಲೀಸರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 15, 2020 | 2:12 PM

Share

ಮಹಾರಾಷ್ಟ್ರ:ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳಿಗೆ ಬುಲ್ಖಾನ ವಿಶೇಷ ಸೆಷನ್ಸ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅತ್ಯಾಚಾರಿಗಳನ್ನು ಬಂಧಿಸಿದ್ದ ಪೊಲೀಸರು ತಮ್ಮ  ಪೊಲೀಸ್ ಠಾಣೆಯನ್ನು ಮದುವಣಗಿತ್ತಿಯಂತೆ ಶೃಂಗರಿಸಿ ಸಂಭ್ರಮಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

2019ರ ಏಪ್ರಿಲ್ 26ರಂದು ಸಾಗರ್ ಮತ್ತು ನಿಖಿಲ್ ಎಂಬ ಕೀಚಕರು ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆಯ ತಂದೆ ಚಿಕ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತಕ್ಷಣವೇ ಕಾರ್ಯೋನ್ಮುಖರಾದ ಪೊಲೀಸರು ಆರೋಪಿಗಳನ್ನು ಬಹುಬೇಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಆರೋಪಿಗಳನ್ನು ಬಂಧಿಸಿ, ಪೊಲೀಸರು ನ್ಯಾಯಾಲಕ್ಕೆ ಒಪ್ಪಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಯ ಸೆಕ್ಷನ್ 376 ರ ಅಡಿ ಇಬ್ಬರು ಆರೋಪಿಗಳಿಗೆ ಮರಣದಂಡನೆಯನ್ನು ಘೋಷಿಸಿತು.

ಇದರಿಂದ ಸಂತ್ರಸ್ತೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಟ್ಟ ಖುಷಿಯಲ್ಲಿ ಪೊಲೀಸರು, ಪೊಲೀಸ್ ಠಾಣೆಯನ್ನು ಮದುವಣಗಿತ್ತಿಯಂತೆ ಸಿಂಗರಿಸಿ, ಠಾಣೆಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ತೀರ್ಪಿನ ವಿರುದ್ಧ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅಪರಾಧಿಗಳಿಗೆ ಇನ್ನೂ ಸಮಯ ಇರುವುದರಿಂದ ಅವರ ಗಲ್ಲಿಗೇರಿಸುವ ದಿನಾಂಕವನ್ನು ನ್ಯಾಯಾಲಯ ನಿಗದಿಪಡಿಸಿಲ್ಲ.

Published On - 1:24 pm, Sat, 15 August 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು