ಬಿಸಿ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಇಬ್ಬರು ಆರೋಪಿಗಳ ಬಂಧನ

ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಾದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ಬಿಸಿ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಇಬ್ಬರು ಆರೋಪಿಗಳ ಬಂಧನ
ಪುನರ್ವಸತಿ ಕೇಂದ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 19, 2023 | 8:06 PM

ಬೆಂಗಳೂರು: ನಗರದ ಪುನರ್ವಸತಿ ಕೇಂದ್ರಕ್ಕೆ (rehabilitation) ಚಿಕಿತ್ಸೆಗೆ ದಾಖಲಾದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ರಿಹ್ಯಾಬಿಲಿಟೇಶನ್ ಸೆಂಟರ್​ನ ರವಿ ಮತ್ತು ಲೋಹಿತ್ ಬಂಧಿತ ಆರೋಪಿಗಳು. ಸ್ನಾನಕ್ಕೆ ಬಿಸಿ ನೀರು ಬೇಕೆಂದು ಪ್ರಾರಂಭವಾದ ಜಗಳ ಸಾವಿನಲ್ಲಿ ಅಂತ್ಯವಾಗಿತ್ತು. ಆರಿಫ್(30) ಕೊಲೆಯಾದ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆರಿಫ್ ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ. ಶ್ರೀಸಾಯಿ ದೀನಬಂಧು ರಿಹ್ಯಾಬಿಲಿಟೇಶನ್ ಸೆಂಟರ್​ನಲ್ಲಿ ಆರೀಫ್ ಇದ್ದ. ಕುಡಿತದ ಚಟ ಬಿಡಿಸಲು ಕುಟಂಬಸ್ಥರು ಶ್ರೀ ಸಾಯಿ ಸೆಂಟರ್​ನಲ್ಲಿ ಬಿಟ್ಟು ಬಂದಿದ್ದರು.

ಈ ಸಂದರ್ಭದಲ್ಲಿ ಆರಿಫ್​ಗೆ ಅಮಾನುಷವಾಗಿ, ಮಾರಣಾಂತಿಕವಾಗಿ ರವಿ ಮತ್ತು ಲೋಹಿತ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸತ್ತ ವ್ಯಕ್ತಿಯನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ಆರೀಪ್​ನ ಕಾಲು, ಸೊಂಟ, ಬೆನ್ನಿಗೆ ಕಬ್ಬಿಣದ ರಾಡ್​ನಿಂದ ಹೊಡೆದು ರಕ್ತ ಹೆಪ್ಪುಗಟ್ಟುವಂತೆ ಹಲ್ಲೆ ಮಾಡಲಾಗಿತ್ತು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ವಿಜಯಪುರ: ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ, ತಡವಾಗಿ ಬೆಳಕಿಗೆ

ಕಾಡಾನೆ ದಾಳಿಯಿಂದ ದಿನಗೂಲಿ ಫಾರೆಸ್ಟ್ ವಾಚರ್ ಸಾವು

ಚಾಮರಾಜನಗರ: ಕಾಡಾನೆ ದಾಳಿಯಿಂದ ದಿನಗೂಲಿ ಫಾರೆಸ್ಟ್ ವಾಚರ್ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ನಡೆದಿದೆ. ಪುಣಜನೂರು ಹೊಸಪೋಡು ನಿವಾಸಿ ನಂಜಯ್ಯ(35) ಮೃತ ವ್ಯಕ್ತಿ. 2 ದಿನಗಳ ಹಿಂದಷ್ಟೇ ನಂಜಯ್ಯ ಅವರನ್ನು ದಿನಗೂಲಿ ನೌಕರನಾಗಿ ಅರಣ್ಯ ಇಲಾಖೆ ನೇಮಿಸಿಕೊಂಡಿತ್ತು. ವಡ್ಗಲ್‌ಪುರ, ಚೆನ್ನಪ್ಪನಪುರ ಸುತ್ತಮುತ್ತ ಆನೆಗಳ ಹಿಂಡು ಒಡಾಡುತ್ತಿದ್ದವು. ಆನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ದಾಳಿ ಮಾಡಲಾಗಿದೆ ಎನ್ನಲಾಗುತ್ತಿದೆ.

ಆಕಸ್ಮಿಕ ಬೆಂಕಿ ತಗುಲಿ 32 ಎಕರೆ ಕಬ್ಬು ಸಂಪೂರ್ಣ ಭಸ್ಮ

ಗದಗ: ಆಕಸ್ಮಿಕ ಬೆಂಕಿ ತಗುಲಿ 32 ಎಕರೆ ಕಬ್ಬು ಸಂಪೂರ್ಣ ಭಸ್ಮವಾಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಳ್ಳಿಯಲ್ಲಿ ನಡೆದಿದೆ. ರೈತ ವೈ. ಶೇಷಗಿರಿರಾವ್​ಗೆ ಸೇರಿದ 32 ಎಕರೆ ಕಬ್ಬು ನಾಶವಾಗಿದ್ದು, ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಯತ್ನಿಸಿದ್ದು, ನಿರಂತರ ಪ್ರಯತ್ನಿಸಿದ್ರೂ ಬೆಂಕಿ ಹತೋಟಿಗೆ ಬರಲಿಲ್ಲ. ಬೆಂಕಿ ಕೆನ್ನಾಲಿಗೆ ನೋಡಿ ರೈತ ವೈ.ಶೇಷಗಿರಿರಾವ್ ಕಂಗಾಲಾದರು. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಆಗ್ರಹಿಸಿದರು. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಬೈಕ್​ನಲ್ಲಿ ಎಳೆದೊಯ್ದ ಪ್ರಕರಣ: ಚಾಲಕ ಮುತ್ತಪ್ಪನನ್ನು ಸಾಯಿಸುವ ಉದ್ದೇಶ ಇತ್ತು ಎಂದು ತಪ್ಪೊಪ್ಪಿಕೊಂಡ ಆರೋಪಿ ಶಾಹಿಲ್​

ಈಜಲು ಹೋದ ವಿದ್ಯಾರ್ಥಿ ನದಿ ಪಾಲು

ಮೈಸೂರು: ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಕೆಆರ್​​ನಗರ ತಾಲ್ಲೂಕು ಚುಂಚನಕಟ್ಟೆಯಲ್ಲಿ ನಡೆದಿದೆ. ಸುದೀಪ್ (20) ಸಾವನ್ನಪ್ಪಿದ ವಿದ್ಯಾರ್ಥಿ. ಮೈಸೂರಿನ ಶಾರದ ವಿಲಾಸ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ನದಿಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Thu, 19 January 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ