ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಅಪರಾಧImage Credit source: Mint
Follow us
ನಯನಾ ರಾಜೀವ್
|

Updated on: Dec 04, 2023 | 2:29 PM

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನವೆಂಬರ್ 3 ರಂದು ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಆಗ ತಂಗಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಕಾಡಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯುವತಿ ಸಿಯಾಲಿ ಎಲೆಗಳನ್ನು ಸಂಗ್ರಹಿಸಲು ಹತ್ತಿರದ ಕಾಡಿಗೆ ಹೋಗಿದ್ದಳು, ಕಾಕತಾಳೀಯವೆಂಬಂತೆ ಆಕೆಯ ಅಣ್ಣ ಕೂಡ ದನಗಳೊಂದಿಗೆ ಅಲ್ಲಿಗೆ ಬಂದಿದ್ದ. ಪರಿಸ್ಥಿತಿಯ ಲಾಭ ಪಡೆದು ಸ್ನೇಹಿತರನ್ನು ಕಾಡಿಗೆ ಕರೆಸಿದ.

ಮದ್ಯಪಾನ ಮಾಡಿಸಿದ್ದಾನೆ, ಕುಡಿದ ಅಮಲಿನಲ್ಲಿದ್ದ ತನ್ನ ನಾಲ್ವರು ಸ್ನೇಹಿತರೊಂದಿಗೆ ತಂಗಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕತ್ತು ಹಿಸುಕಿ ಕೊಲೆ ಮಾಡಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುವ ಭಯದಿಂದ ನವೆಂಬರ್ 6 ರಂದು ಕಾಣೆಯಾದ ವರದಿಯನ್ನು ಸಲ್ಲಿಸಿದ್ದಾರೆ.

ತನಿಖೆಯ ವೇಳೆ ಪೊಲೀಸರಿಗೆ ನವೆಂಬರ್ 7 ರಂದು ಕಾಡಿನಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮಹಿಳೆಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆಕೆಯ ಮೇಲೆ ಅನೇಕ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ