ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ. ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ […]

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​

Updated on: Jan 30, 2020 | 10:31 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ.

ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಆರೋಪಿಯು ಕಳೆದ 6 ತಿಂಗಳಿಂದ ರೆಸ್ಟೋರೆಂಟ್​ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ. ಆ ದಿನ ಮಹಿಳಾ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನಲ್ಲಿ ಆರೋಪಿಯೇ ಕೆಲಸ ಮಾಡುತ್ತಿದ್ದ. ಹಾಗಾಗಿ ಆತನೇ ಕೃತ್ಯ ಎಸಗಿದ್ದ ಎಂದು ತರ್ಕಿಸಲಾಗಿತ್ತು. ಜೊತೆಗೆ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ್ದ ವೇಳೆ ಟೆಕ್ಕಿಯೊಬ್ಬರು ಆರೋಪಿಯ ಚಲನವಲನವನ್ನುಗಮನಿಸಿದ್ದರು. ಈ ಹಿನ್ನೆಲೆಯಲ್ಲಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Published On - 9:30 am, Thu, 30 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us